

ಬಾಗಲಕೋಟೆ: ಲೋಕಸಭಾ ಚುನಾವಣೆ-2024ರ ನೀತಿ ಸಂಹಿತೆ ಹಿನ್ನಲೆಯಲ್ಲಿ ನಗರದ ರೇಲ್ವೆ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಭೇಟಿ ನೀಡಿ ಪೊಲೀಸ್ ಚೆಕ್‍ಪೋಸ್ಟಗೆ ತೆರಳಿ ಪರಿಶೀಲನೆ ನಡೆಸಿದರು.
ಶನಿವಾರ ಸಂಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರೊಂದಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಟಾಚಾರಕ್ಕೆ ಮುಖ್ಯ ದ್ವಾರದಲ್ಲಿ ಚೆಕ್‍ಪೋಸ್ಟ ಸ್ಥಾಪಿಸಿರುವ ಬಗ್ಗೆ ಬ್ಯಾನರ್ ಹಾಕಲಾಗಿತ್ತು. ಅಲ್ಲದೇ ಸಿಬ್ಬಂದಿ ಕೂಡಾ ಒಬ್ಬರೇ ಇರುವದನ್ನು ಕಂಡು ಸರತಿ ಪಾಳೆಯಲ್ಲಿ ಸಿಬ್ಬಂದಿ ನೇಮಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರತಿದಿನ ರೈಲು ಬಂದಾಗ ಅನುಮಾನಾಸ್ಪದ ಕಂಡುಬಂದ ಲಗೇಜ್‍ಗಳನ್ನು ಪರಿಶೀಲನೆ ಮಾಡಬೇಕು. ಈ ಬಗ್ಗೆ ಪ್ರತಿದಿನ ಚುನಾವಣಾ ವಿಭಾಗಕ್ಕೆ ವರದಿ ಸಲ್ಲಿಸಲು ಸೂಚಿಸರಲ್ಲದೇ ಚೆಕ್‍ಪೋಸ್ಟನಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸದೇ ಇದ್ದಲ್ಲಿ ಕ್ರಮಕೈಗೊಳ್ಳಲಾಗುವುದು. ಚುನಾವಣೆ ಹಿನ್ನಲೆಯಲ್ಲಿ ಪ್ಲಾಯಿಂಗ್ ಸ್ಕ್ವಾಡ್ ತಂಡ ಭೇಟಿ ನೀಡಲಿದ್ದು, ಸರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಿದರು.