ರೇಷ್ಮೆ ಕೃಷಿಯಲ್ಲಿ ನೂತನ ತಂತ್ರಜ್ಞಾನ ಬಳಕೆ ಅಗತ್ಯ

bkt-11-11 (2)
ಗುಳೇದಗುಡ್ಡ ತಾಲೂಕಿನ ಲಾಯದಗುಂದಿ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಮತ್ತು ರೇಷ್ಮೆ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡ `ನನ್ನ ರೇಷ್ಮೆ ನನ್ನ ಹೆಮ್ಮೆ ರೇಷ್ಮೆ' ವಿಚಾರ ಸಂಕಿರಣ ಕಾರ್ಯಕ್ರಮ ಕೊಪ್ಪಳ ಜಿಲ್ಲಾ ಸಂಶೋಧನಾ ವಿಸ್ತರಣಾ ಕೇಂದ್ರದ ರೇಷ್ಮೆ ಮಂಡಳಿಯ ವಿಜ್ಞಾನಿ ಡಾ.ಎ.ಉಮೇಶ ಚಾಲನೆ ನೀಡಿದರು.
Published on

ಬಾಗಲಕೋಟೆ: ರೈತರು ನೂತನ ತಂತ್ರಜ್ಞಾನ ಬಳಸಿಕೊಂಡು ಗುಣಮಟ್ಟದ ಹಿಪ್ಪುನೇರಳೆ ಸೊಪ್ಪನ್ನು ಪಡೆದುಕೊಳ್ಳುವ ಮೂಲಕ ಹೆಚ್ಚಿನ ಲಾಭಗಳಿಸಬೇಕು ಎಂದು ಕೊಪ್ಪಳ ಜಿಲ್ಲಾ ಸಂಶೋಧನಾ ವಿಸ್ತರಣಾ ಕೇಂದ್ರದ ರೇಷ್ಮೆ ಮಂಡಳಿಯ ವಿಜ್ಞಾನಿ ಡಾ.ಎ.ಉಮೇಶ ಹೇಳಿದರು.

ಗುಳೇದಗುಡ್ಡ ತಾಲೂಕಿನ ಲಾಯದಗುಂದಿ ಗ್ರಾಮದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಮತ್ತು ರೇಷ್ಮೆ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡ `ನನ್ನ ರೇಷ್ಮೆ ನನ್ನ ಹೆಮ್ಮೆ ರೇಷ್ಮೆ' ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ೧೨೦ ಜಿಲ್ಲೆಗಳಲ್ಲಿ ಅಭಿಯಾನ ಜಾರಿಗೆ ತರಲಾಗಿದೆ. ಸಂಶೋಧನಾ ಸಂಸ್ಥೆಯ ಪ್ರಯೋಗ ಶಾಲೆಯಲ್ಲಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನವನ್ನು ರೈತರ ಜಮೀನುಗಳಿಗೆ ತಲುಪಿಸುವ ಮೂಲಕ ರೇಷ್ಮೆ ಉತ್ಪಾದನೆ, ಉತ್ಪಾದಕತೆಯನ್ನು ಹೆಚ್ಚಿಸಿ, ರೈತರ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯನ್ನು ಉತ್ತಮಗೊಳಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

ರೇಷ್ಮೆ ಇಲಾಖೆಯ ಉಪನಿರ್ದೇಶಕ ಎಸ್.ಎಂ.ಕೋರೆ ಮಾತನಾಡಿ, ರೇಷ್ಮೆ ಬೆಳೆಗಾರರು ರೇಷ್ಮೆ ಕೃಷಿಯಲ್ಲಿ ನೂತನ ತಂತ್ರಜ್ಞಾನ ಬಳಸಿಕೊಳ್ಳುವ ಮೂಲಕ ಹೆಚ್ಚಿನ ಲಾಭ ಗಳಿಸಬೇಕು ಎಂದು ಹೇಳಿದರು.

ರೇಷ್ಮೆ ಮಂಡಳಿಯ ನಿವೃತ್ತ ನಿರ್ದೇಶಕ ಡಾ.ಬಿ.ಎಸ್.ಅಂಗಡಿ ಮಾತನಾಡಿ, ಈ ಅಭಿಯಾನ ಅಡಿಯಲ್ಲಿ ನೂತನ ತಾಂತ್ರಿಕತೆಯನ್ನು ಬಳಸಿಕೊಂಡು ವ್ಯವಸ್ಥಿತವಾಗಿ ರೇಷ್ಮೆ ಹುಳುವಿನ ಮನೆಯ ಸೋಂಕು ನಿವಾರಣೆ, ಹುಳುಗಳ ಸಾಕಾಣಿಕೆ ಕ್ರಮಗಳ ಬಗ್ಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net