ರೈತ ಉತ್ಪಾದಕ ಸಂಘಗಳ ಸಂಖ್ಯೆ ಹೆಚ್ಚಲಿ

CTD 23 ADC--0002
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಪ್ರಮಾಣ ಹೆಚ್ಚಳಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಎಡಿಸಿ ಬಿ. ಟಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೈತ ಉತ್ಪಾದಕ ಸಂಸ್ಥೆಗಳಿಗೆ 3 ತಿಂಗಳ ಸ್ಯಾಚುರೇಷನ್ ಡ್ರೈವ್ ತರಬೇತಿಗೆಂದು ನೇಮಿಸಿ ರುವ ಜಿಲ್ಲಾ ಮಟ್ಟದ ರೈತ ಉತ್ಪಾದಕರ ಸಂಸ್ಥೆಗಳ ಸಮನ್ವಯ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು,ಕೃಷಿ ಹಾ ಗೂ ಸಂಬಂಧಿತ ವಿವಿಧ ಇಲಾಖೆ ಅಧಿಕಾರಿಗಳು ಆಸಕ್ತಿ ವಹಿಸಿ ತಿಂಗಳಿಗೆ ಕನಿಷ್ಠ ಒಂದೆರೆಡು ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸಬೇಕು. ರೈ ತರಿಗೆ ಅಧ್ಯಯನ ಶಿಬಿರ,ತರಬೇತಿ, ಕಡಿಮೆ ಬಂಡಾವಳ ಹೂಡಿಕೆ ಮಾಡಿ ಹೆಚ್ಚಿನ ಆದಾಯ ಗಳಿಕೆ ಕುರಿತು ಅರಿವು ಮೂಡಿಸಬೇಕು. ಕೃಷಿ ಕ್ಷೇತ್ರದ ಸುಧಾರಣೆಗೆ ಹಾಗೂ ಕೃಷಿಯಲ್ಲಿ ಆಧುನಿಕರಣಕ್ಕೆ ಹೆಚ್ಚಿನ ಕಾಳಜಿ ವಹಿಸಬೇಕೆಂದರು.
ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಭಾಗದಲ್ಲಿ ರೇಷ್ಮೆ ಪ್ರಚಲಿತದಲ್ಲಿದ್ದು,ಇದರೊಂದಿಗೆ ರೈತರು ಕುರಿ ಸಾಕಾಣಿಕೆ ಅವಲಂಬಿಸಿದ್ದಾರೆ. ಅ ಸಂಘಟಿತ ರೇಷ್ಮೆ ಕೃಷಿಕರು ಹಾಗೂ ಕುರಿಗಾಹಿಗಳ ರೈತ ಉತ್ಪಾದಕ ಸಂಸ್ಥೆಗಳನ್ನು ನಿರ್ಮಾಣ ಮಾಡಬೇಕು. ರಾಜ್ಯದಲ್ಲಿಯೇ ಅತಿ ಹೆಚ್ಚು ಸಿರಿಧಾನ್ಯವನ್ನು ಹೊಸದುರ್ಗ ತಾಲೂಕಿನಲ್ಲಿ ಬೆಳೆಯಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 28 ಸಾವಿರ ಹೆಕ್ಟೇರ್‌ನಲ್ಲಿ ಸಿರಿಧಾನ್ಯ ಬಿತ್ತನೆ ಮಾಡ ಲಾಗಿದೆ. ಇಲ್ಲಿ ಸಿರಿಧಾನ್ಯ ಬೆಳೆಯುವ ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಅವರು ಮಾತನಾಡಿ,ಕೃಷಿ ಇಲಾಖೆಯಡಿ 20,ತೋಟಗಾರಿಕೆ ಇಲಾಖೆ ಡಿ 6,ನಬಾರ್ಡ್ ಅಡಿ 7 ಸೇರಿದಂತೆ ಜಿಲ್ಲೆಯಲ್ಲಿ 33 ರೈತ ಉತ್ಪಾದಕ ಸಂಘಗಳನ್ನು ರಚಿಸಲಾಗಿದೆ. ಇವುಗಳಲ್ಲಿ 21 ಸಂಘಗಳು ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟ ನಾಶಕ ಮಾರಾಟದ ಪರವಾನಗಿ ಪಡೆದಿವೆ. 17 ಎಪಿಎಂಸಿ ಹಾಗೂ 9 ಸಂಘಗಳಿಗೆ ಎಫ್‌ಎಸ್‌ಎಸ್‌ಎಐ ಪರ ವಾನಗಿ ಪಡೆದಿವೆ. 22 ಸಂಘಗಳ ಜಿಎಸ್‌ಟಿ ನೋಂದಣಿ ಆಗಿದೆ ಎಂದರು. ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀ ಯ ಸೇವಾ ಇಲಾಖೆಯಿಂದ ಟೋಲ್ ಫ್ರೀ ಸಂಖ್ಯೆ 1962 ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು. ಎ ಎಸ್‌ಪಿ ಎಸ್.ಜೆ.ಕುಮಾರಸ್ವಾಮಿ,ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಎನ್.ಕುಮಾರ್,ಕ ರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ.ತಿಪ್ಪೇಸ್ವಾಮಿ, ಕೃಷಿ ಇಲಾಖೆ ಉಪನಿರ್ದೇಶಕರಾದ ಕೆ.ಎ ಸ್.ಶಿವಕುಮಾರ್,ಬಿ.ಎನ್.ಪ್ರಭಾಕರ್,ನಬಾರ್ಡ್ ಜಿಲ್ಲಾ ಸಂಯೋಜಕಿ ಕವಿತಾ,ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್ ಮತ್ತಿತರ ಅಧಿ ಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net