ರೈತ ಮುಖಂಡರ ಆರೋಪ ಸತ್ಯಕ್ಕೆ ದೂರ

Y.C.Nagendra
Published on

ಚಾಮರಾಜನಗರ: ಚಾ.ನಗರ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಉತ್ತಮ ಭಾಂದವ್ಯವನ್ನು ಹೊಂದಿದ್ದು, ರೈತಮುಖಂಡರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಚಾಮುಲ್ ಅಧ್ಯಕ್ಷ ವೈ.ಸಿ. ನಾಗೇಂದ್ರ ಸ್ಪಷ್ಟನೆ ನೀಡಿದರು.

ಕಳೆದ ಎರಡುವರೆ ವರ್ಷಗಳ ಹಿಂದೆ ಚಾಮುಲ್ ಅಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಒಕ್ಕೂಟದ ಅಭಿವೃದ್ದಿಗೆ ಶ್ರಮಿಸುತ್ತಿದ್ದೇನೆ. ಹಾಲು ಉತ್ಪಾದಕರ ರೈತರಿಗೆ ಒಕ್ಕೂಟ ಹಾಗೂ ಸರ್ಕಾರದಿಂದ ದೊರೆಯುವ ಎಲ್ಲಾ ಸಲವತ್ತುಗಳನ್ನು ಕಲ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಅಧ್ಯಕ್ಷರ ನಡುವಿನ ಮನಸ್ತಾಪಗಳಿಂದ ಚಾಮುಲ್ ಅಭಿವೃದ್ಧಿ ಕಾಣುತ್ತಿಲ್ಲ ಎಂಬ ರೈತ ಮುಖಂಡರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಹಾಲು ಒಕ್ಕೂಟದಲ್ಲಿ ಪ್ರತಿನಿತ್ಯ ಹೆಚ್ಚಿನ ಹಾಲು ಶೇಖರಣೆಯಾಗುತ್ತಿದ್ದು, ಮಾರುಕಟ್ಟೆ ಕಡಿಮೆ ಇರುವುದರಿಂದ ಹಾಲಿನ ಮಾರಾಟ ಕಡಿಮೆಯಾಗಿದೆ. ಚಾ.ನಗರ ಜಿಲ್ಲಾ ಹಾಲು ಒಕ್ಕೂಟದಿಂದ ಜ.1 ರಿಂದ ಹಾಲು ಉತ್ಪಾದಕರ ರೈತರಿಗೆ ಒಂದು ರೂ.ಗಳ ಏರಿಕೆ ಮಾಡಲು ನಿರ್ದೇಶಕರ ಸಭೆ ಕರೆದು ಅನುಮೋದನೆ ಪಡೆದುಕೊಂಡು ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net