

ಚಾಮರಾಜನಗರ: ರೈತರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ಸದಸ್ಯರು ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು.
ಪ್ರಸಕ್ತ ಸಾಲಿನ ಪ್ರತಿ ಟನ್ ಕಬ್ಬಿಗೆ 4500 ರೂ.ನಿಗದಿ ಮಾಡಬೇಕು. ಕಟಾವು ಮತ್ತು ಸಾಗಾಣಿಕೆಯನ್ನು ಸಕ್ಕರೆ ಕಾರ್ಖಾನೆಗಳು ಬರಿಸಬೇಕು. ಕಳೆದ ಸಾಲಿನ 950 ಕೋಟಿ ರೂ. ರೈತರಿಗೆ ಬಾಕಿ ನೀಡಬೇಕು ಎಂದು ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಮಲಿಯೂರು ಮಹೇಂದ್ರ, ತಾಲೂಕ ಅಧ್ಯಕ್ಷ ಸತೀಶ್, ಕಾಳಪ್ಪ ಮಹೇಶ್, ಶ್ರೀಕಂಠ, ನಾಗರಾಜಪ್ಪ, ನಾಗಮಲ್ಲಪ್ಪ ಮುಕಡಹಳ್ಳಿ ರಾಜು, ಮಹೇಶ್ ಹೊನ್ನೇಗೌಡನಹಳ್ಳಿ ಮಹೇಶ್ ಇದ್ದರು.