ರೈತ ಸೇವಾ ಕೇಂದ್ರಕ್ಕೆ ರೂ. 2 ಕೋಟಿ ಮಂಜೂರು

MDG krushi
ಎನ್.ಆರ್.ಪುರ ಕೃಷಿ ಇಲಾಖೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರು, ಶಾಸಕ ಟಿ.ಡಿ.ರಾಜೇಗೌಡ, ಅಂಶುಮಂತ್ ಅವರನ್ನು ಸನ್ಮಾನಿಸಲಾಯಿತು. ಪಿ.ಆರ್.ಸದಾಶಿವ, ಗೇರ್‌ಬೈಲು ನಟರಾಜ, ಪಿ.ಕೆ.ಬಸವರಾಜಪ್ಪ, ನಾಗರಾಜ್, ಎನ್.ಪಿ.ರಮೇಶ್ ಇತರರಿದ್ದರು.
Published on

ಎನ್.ಆರ್.ಪುರ: ತಾಲೂಕಿನಲ್ಲಿ ರೈತ ಸೇವಾ ಕೇಂದ್ರಕ್ಕೆ ಸರ್ಕಾರ 2 ಕೋಟಿ ರೂಪಾಯಿ ಮಂಜೂರು ಮಾಡಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ಸೋಮವಾರ ಕೃಷಿ ಇಲಾಖೆಯಲ್ಲಿ ತಾಲೂಕು ಕೃಷಿಕ ಸಮಾಜಕ್ಕೆ ಆಯ್ಕೆಯಾದ 5 ಪದಾಧಿಕಾರಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ರೈತ ಸೇವಾ ಕೇಂದ್ರ ಕಟ್ಟಡ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಸರ್ಕಾರದ ರೈತರ ಪರ ಕಾರ್ಯಕ್ರಮಗಳನ್ನು ಪಕ್ಷಾತೀತವಾಗಿ ಕಟ್ಟ ಕಡೆಯ ರೈತರಿಗೂ ತಲುಪಿಸುವ ಜವಾಬ್ದಾರಿ ಕೃಷಿ ಇಲಾಖೆ ಹಾಗೂ ತಾಲೂಕು ಕೃಷಿಕ ಸಮಾಜದ್ದಾಗಿದೆ ಎಂದು ಹೇಳಿದರು.

ಶಿವಮೊಗ್ಗ ಭದ್ರಾ-ಕಾಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ಮಾತನಾಡಿ, ತಾಲೂಕು ಕೃಷಿಕ ಸಮಾಜದಲ್ಲಿ ಹಳೇ ಬೇರು, ಹೊಸ ಚಿಗುರಿನಂತೆ ಅನುಭವ ಇರುವ ರೈತರು ಹಾಗೂ ಯುವ ರೈತರು ಒಟ್ಟಾಗಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಎನ್.ಆರ್.ಪುರ ರೈತರಿಗೆ ಬೇಕಾದ ಕೃಷಿ ಪರಿಕರಗಳನ್ನು ಒದಗಿಸುವ ಕೆಲಸ ಮಾಡಿ ರೈತರಿಗೆ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

ತಾಲೂಕು ಕೃಷಿಕ ಸಮಾಜದ 15 ನಿರ್ದೇಶಕರ ಪೈಕಿ 5 ಪದಾಧಿಕಾರಿಗಳು ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ಮಹೇಶ್ ಕಾರ್ಯ ನಿರ್ವಹಿಸಿದರು. ತಾಲೂಕು ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಬಿ.ಕೆ.ನಾರಾಯಣಸ್ವಾಮಿ, ಉಪಾಧ್ಯಕ್ಷರಾಗಿ ಡಿ.ಜಿ.ಮಂಜಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಎಚ್.ಕೆ.ನವೀನ್, ಖಜಾಂಚಿ ಬಿ.ಎಸ್.ಚೇತನ್, ಜಿಲ್ಲಾ ಪ್ರತಿನಿಧಿಯಾಗಿ ಪಿ.ಕೆ.ಬಸವರಾಜಪ್ಪ ಅವಿರೋಧವಾಗಿ ಆಯ್ಕೆಯಾದವರು.

ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲ್ ನಟರಾಜ, ತಾಲೂಕು ಕೃಷಿಕ ಸಮಾಜದ ನೂತನ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ, ಉಪಾಧ್ಯಕ್ಷ ಡಿ.ಜಿ.ಮಂಜಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಎಚ್.ಕೆ.ನವೀನ್, ಖಜಾಂಚಿ ಬಿ.ಎಸ್.ಚೇತನ್, ಜಿಲ್ಲಾ ಪ್ರತಿನಿಧಿ ಪಿ.ಕೆ.ಬಸವರಾಜಪ್ಪ, ಕಾರ್ಯಕಾರಿ ಸಮಿತಿ ಸದಸ್ಯರಾದ ನಾಗರಾಜ್, ಎನ್.ಪಿ.ರಮೇಶ್, ಎಚ್.ಎನ್.ರವಿಶಂಕರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net