

ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯ ಸರಗೂರು ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಅರಣ್ಯ ಇಲಾಖೆ ಪರಿಹಾರದ ಚೆಕ್ ವಿತರಿಸಿದೆ.
ಹೆಡಿಯಾಲ ಉಪವಿಭಾಗದ ಮೊಳೆಯೂರು ವಲಯದ ಕಾಡಂಚಿನ ಗ್ರಾಮದಲ್ಲಿ ಜೂ.1ರಂದು ರಾತ್ರಿ ಜಮೀನಿನ ಕಾವಲು ಕಾಯಲು ತೆರಳಿದ್ದ ರವಿಕುಮಾರ್ ಮೇಲೆ ಕಾಡಾನೆ ದಾಳಿ ನಡೆಸಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಶುಕ್ರವಾರ ಸ್ಥಳಕ್ಕೆ ತೆರಳಿದ ಹುಲಿ ಯೋಜನೆಯ ಕ್ಷೇತ್ರ ನಿರ್ದೇಶಕ ಡಾ.ರಮೇಶ್‌ಕುಮಾರ್ ಮೃತರ ಕುಟುಂಬದ ಸದಸ್ಯರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.
ಎಸಿಎಫ್ ಕೆ.ಪರಮೇಶ್, ಹೆಡಿಯಾಲ, ಎನ್.ಬೇಗೂರು, ಗುಂಡ್ರೆ, ಮೊಳೆಯೂರು ವಲಯಗಳ ಆರ್.ಎಫ್.ಒ ಗಳು ಹಾಗೂ ಪೊಲೀಸ್ ಅಧಿಕಾರಿಗಳು ಇದ್ದರು.