ರೈತಪರ ಹೋರಾಟಗಾರರನ್ನು ಸ್ಮರಿಸೋಣ

21-pnp 2
Published on

ಪಾಂಡವಪುರ: ರೈತಪರ ಹೋರಾಟದಲ್ಲಿ ಸಕ್ರಿಯರಾಗಿ ಕೃಷಿಕರ ಪ್ರಗತಿಗಾಗಿಯೇ ಜೀವವನ್ನು ಮುಡಿಪಾಗಿಟ್ಟು ಹುತಾತ್ಮರಾದವರನ್ನು ಸ್ಮರಿಸೋಣ ಎಂದು ರೈತನಾಯಕಿ ಸುನೀತಾ ಪುಟ್ಟಣ್ಣಯ್ಯ ಹೇಳಿದರು.
ರೈತ ಹುತಾತ್ಮ ದಿನಾಚರಣೆ ಹಿನ್ನೆಲೆಯಲ್ಲಿ ತಾಲೂಕಿನ ಕ್ಯಾತನಹಳ್ಳಿಯಲ್ಲಿ ಹರವು, ಅರಳಕುಪ್ಪೆ, ಎಣ್ಣೆಹೊಳೆಕೊಪ್ಪಲು ಗ್ರಾಮದ ರೈತರೊಂದಿಗೆ ಕೆ.ಎಸ್.ಪುಟ್ಟಣ್ಣಯ್ಯ ಪುತ್ಥಳಿಗೆ ಶುಕ್ರವಾರ ಪೂಜೆ ಸಲ್ಲಿಸಿದ ನಂತರ ಅವರು ಮಾತನಾಡಿದರು.
ಸಮಾಜಪರವಾದ ಚಿಂತನೆಯೊಂದಿಗೆ ರೈತ ಚಳವಳಿ ಮತ್ತು ಹೋರಾಟಗಳಲ್ಲಿ ಹಲವು ನಾಯಕರು ಶ್ರಮಿಸಿದ್ದಾರೆ. ಹೋರಾಟಗಳಲ್ಲಿ ಸಾವಿರಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಅಂತಹ ಎಲ್ಲಾ ರೈತ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ರೈತ ಕುಲದ ಉದ್ಧಾರಕ್ಕಾಗಿ ಹೋರಾಟ ಮಾಡಿದ ಹುತಾತ್ಮರ ಆತ್ಮಕ್ಕೆ ಭಗವಂತ ಶಾಂತಿ ನೀಡಿಲಿ ಎಂದು ಪ್ರಾರ್ಥಿಸೋಣ ಎಂದರು.
ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಎಸ್.ದಯಾನಂದ, ಮುಖಂಡರಾದ ಕೆ.ಪಿ.ಮಹದೇವ, ಲೋಕೇಶ್, ಹರವು ಪ್ರಕಾಶ್, ಎಣ್ಣೆಹೊಳೆಕೊಪ್ಪಲು ಮಂಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net