ರೈತರ ಉತ್ಪನ್ನಗಳಿಗೆ ಬ್ರ‍್ಯಾಂಡ್ ಅಗತ್ಯ

bkt-21-2
ಬಾಗಲಕೋಟೆ ತೋಟಗಾರಿಕೆ ವಿವಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ, ತೋಟಗಾರಿಕೆ, ಕೆಪೆಕ್ ಮತ್ತು ತೋಟಗಾರಿಕೆ ವಿವಿಯ ಸಹಯೋದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳ ಖರೀದಿದಾರರ ಮತ್ತು ಮಾರಾಟಗಾರರ ಸಮ್ಮೇಳನ-ಸಂವಾದ ಹಾಗೂ ಸಿರಿಧಾನ್ಯ ಮೇಳ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.
Published on

ಬಾಗಲಕೋಟೆ: ರೈತರು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗಬೇಕಾದರೆ ಬ್ರ‍್ಯಾಂಡ್ ಅಗತ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ತೋಟಗಾರಿಕೆ ವಿವಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ, ತೋಟಗಾರಿಕೆ, ಕೆಪೆಕ್ ಮತ್ತು ತೋಟಗಾರಿಕೆ ವಿವಿಯ ಸಹಯೋದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳ ಖರೀದಿದಾರರ ಮತ್ತು ಮಾರಾಟಗಾರರ ಸಮ್ಮೇಳನ-ಸಂವಾದ ಹಾಗೂ ಸಿರಿಧಾನ್ಯ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತ ಕಷ್ಟಪಟ್ಟು ಬೆಳೆಯನ್ನು ಬೆಳೆಯುತ್ತಾನೆ. ಬೆಳೆ ಬಂದ ಮೇಲೆ ಉತ್ತಮ ಬೆಲೆ ಸಹ ಸಿಗುವುದಿಲ್ಲ. ಇದರಿಂದ ರೈತ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಆಧುನಿಕ ಜಗತ್ತಿಗೆ ತಕ್ಕಂತೆ ಉತ್ಪನ್ನಗಳಿಗೆ ಬ್ರ‍್ಯಾಂಡ್ ರೂಪ ಕೊಟ್ಟು ಮಾರುಕಟ್ಟೆಗೆ ತಂದಲ್ಲಿ ಉತ್ತಮ ಬೆಲೆ ಸಿಗುತ್ತಿದೆ ಎಂದರು.

ಕೃಷಿಯಿAದ ಯುವಕರು ಬಹಳಷ್ಟು ದೂರ ಉಳಿಯುತ್ತಿದ್ದಾರೆ. ಇದಕ್ಕೆ ಕಾರಣ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಾಗುವದಿಲ್ಲ. ಅದನ್ನು ಯಾವ ರೀತಿಯಲ್ಲಿ ಹೋಗಲಾಡಿಸಬೇಕು. ಉತ್ಪಾದನಾ ಕೇಂದ್ರಗಳು ಹೆಚ್ಚಿಗೆ ಆಗಬೇಕು. ಹುನಗುಂದ ತಾಲೂಕಿನ ಎಫ್‌ಪಿಒ ೮೦ ಕೋಟಿ ರೂ.ಗಳ ವಹಿವಾಟು ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇಂತಹ ಎಫ್‌ಪಿಒಗಳಿಗೆ ಪ್ರೋತ್ಸಾಹ ನೀಡುವ ಕೆಲಸವಾಗಬೇಕು. ಇಲ್ಲಿಯ ಬೆಳೆ ಹೆಚ್ಚಿನ ಉತ್ಪನ್ನಗಳು ರಪ್ತು ಆಗಬೇಕು. ಅದಕ್ಕಾರಿ ಮಾರುಕಟ್ಟೆಗಳು ನಿರ್ಮಾಣವಾಗಬೇಕು. ಇಂತಹದೊAದು ಸಮ್ಮೇಳನ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಮಾತನಾಡಿ, ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದೇ ಮಧ್ಯವರ್ತಿಗಳಿಂದ ನಲುಗಿ ಹೋಗುತ್ತಿದ್ದಾರೆ. ಕೃಷಿ, ತೋಟಗಾರಿಕೆ ಬೆಳೆಗಳನ್ನು ಆಸಕ್ತಿಯಿಂದ ಬೆಳೆಯುತ್ತಾರೆ. ಬೆಳೆದ ಉತ್ಪನ್ನಗಳಿಗೆ ಒಳ್ಳೆಯ ಬೆಳೆ ಸಿಗಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆ, ತೋವಿವಿಯು ಮಾರುಕಟ್ಟೆ ಕಲ್ಪಿಸುವ ವ್ಯವಸ್ಥೆ ಆಗಬೇಕು. ಅಂದಾಗ ರೈತ ಆರ್ಥಿಕವಾಗಿ ಬಲಿಷ್ಠರಾಗಲು ಸಾಧ್ಯವಾಗುತ್ತದೆ. ಅಲ್ಲದೆ ಇಂದಿನ ಬೆಳೆಗಳಲ್ಲಿ ರಾಸಾಯನಿಕ ಸಿಂಪಡಣೆ ಹೆಚ್ಚಾಗುತ್ತಿವೆ. ಅಪ್ರಾಪ್ತ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ರೈತರು ಮೂಲ ಕೃಷಿ ಒಲಿಯಬೇಕಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ, ರೈತರ ಉತ್ಪನ್ನಗಳಿಗೆ ಪ್ರಚಾರ ಹೆಚ್ಚಾಗಬೇಕು. ಅಂದಾಗ ಮಾತ್ರ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಪ್ರಚಾರದಲ್ಲಿ ವಿಫಲರಾಗುತ್ತಿದ್ದೇವೆ. ರೈತರಿಗೆ ಯೋಗ್ಯವಾದ ಪ್ರತಿಫಲ ಸಿಗುತ್ತಿಲ್ಲ. ಬೆಳೆದ ಉತ್ಪನ್ನಗಳ ಶ್ರಮಕ್ಕೆ ಪ್ರತಿಫಲ ಸಿಗುತ್ತಿಲ್ಲ. ಇದರಿಂದ ರೈತರ ಆತ್ಮಹತ್ಯೆ ಪ್ರಕರಣಗಳು ದ್ವಿಗುಣಗೊಳ್ಳುತ್ತೀವೆ. ಇದಕ್ಕೆ ಕಾರಣ ಹುಡುಕಿ ಪರಿಹಾರ ಕಂಡುಕೊಳ್ಳುವ ಕೆಲಸವಾಗಬೇಕಿದೆ ಎಂದು ತಿಳಿಸಿದರು.

ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿ, ರೈತರು ಸಾಧನೆ ಮಾಡಿದವರಿಗೆ ಸನ್ಮಾನ ಮಾಡಿ ಸೂಕ್ತ ಬಹುಮಾನ ನೀಡಿದರೆ, ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಪರಿಹಾರ ಸಹ ಸರ್ಕಾರ ಕೊಡಲಾಗುತ್ತದೆ. ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರ ಕಾರಣಗಳನ್ನು ತಿಳಿದು ರೈತರನ್ನು ಉಳಿಸಿಕೊಳ್ಳುವ ಕಾರ್ಯವಾಗಬೇಕಿದೆ. ಜಿಲ್ಲೆಯ ಎಫ್‌ಪಿಒಗಳು ಮಧ್ಯಸ್ಥಿಕೆ ವಹಿಸಿ ಹೆಚ್ಚಿನ ಪ್ರಮಾಣದಲ್ಲಿ ಒಡಂಬಡಿಕೆ ಆಗುವಂತೆ ಮಾಡಬೇಕು ಎಂದರು.

ಜಿಲ್ಲಾಽಕಾರಿ ಸಂಗಪ ಎಂ., ಜಿ.ಪಂ ಸಿಇಒ ಶಶಿಧರ ಕುರೇರ ಮಾತನಾಡಿದರು. ಈ ಸಂದರ್ಭದಲ್ಲಿ ಕಳೆದ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ೧೦ ಜನ ರೈತರನ್ನು ಸನ್ಮಾನಿಸಿ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮ ಪೂರ್ವದಲ್ಲಿ ಕೃಷಿ, ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಚಾಲನೆ ನೀಡಿದರು.

ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆನ್ನವರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಹಾಂತೇಶ ಹಟ್ಟಿ, ಹಾಪ್ ಕಾಮ್ಸ್ನ ಅಧ್ಯಕ್ಷ ಈರಪ್ಪ ಅರಕೇರಿ, ತೋಟಗಾರಿಕೆ ವಿವಿಯ ಕುಲಪತಿ ಡಾ.ವಿಷ್ಣುವರ್ಧನ, ಲಾಲ್‌ಬಾಗನ ತೋಟಗಾರಿಕೆ ಅಪರ ನಿರ್ದೇಶಕ ಡಾ.ಪಿ.ಎಂ.ಸೊಬರದ, ಕಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ, ಪ್ರಧಾನ ವ್ಯವಸ್ಥಾಪಕ ಎಚ್.ಕೆ.ಶಿವಕುಮಾರ, ಬೆಳಗಾವಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕ ಐ.ಕೆ.ದೊಡ್ಡಮನಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಲಕ್ಷ÷್ಮಣ ಕಳ್ಳೇನ್ನವರ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net