ರೈತರ ಬೈಕ್ ರ‌್ಯಾಲಿ 26ರಂದು

047c4680-95d9-4fbd-b114-5225e263c488 (1)---000011
Published on

ಚಿತ್ರದುರ್ಗ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜ. 26 ರಂದು ಬೆಳಗ್ಗೆ ಟ್ರಾೃಕ್ಟರ್ ಪರೇಡ್ ನಡೆಸಲು ಕರೆ ಕೊಟ್ಟಿದೆ. ಅದರಂತೆ ಕರ್ನಾಟಕದಲ್ಲೂ ಎಸ್‌ಕೆಎಂ ಸಂಯೋಜನೆ ಸಂಘಟನೆಗಳಿಂದ ಜಿಲ್ಲಾ ಕೇಂದ್ರಗಳಲ್ಲಿ ಟ್ರಾೃಕ್ಟರ್ ಪರೇಡ್ ನಡೆಯಲಿದೆ.
ಆದರೆ, ಅಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಕನಕ ವೃತ್ತದಿಂದ ಟ್ರಾೃಕ್ಟರ್ ಬದಲು ಬೈಕ್ ರ‌್ಯಾಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಘೋಷಿಸಿರುವ 5300 ಕೋಟಿ ರೂ.ಗಳನ್ನು ಫೆಬ್ರವರಿ ಅಂತ್ಯದೊಳಗೆ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರನ್ನು ಈಚೆಗೆ ಭೇಟಿ ಮಾಡಿ ಒತ್ತಾಯಿಸಲಾಗಿದೆ. ಶೀಘ್ರ ಅನುದಾನ ಬಿಡುಗಡೆ ಮಾಡುವ ಮೂಲಕ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಫೆಬ್ರವರಿ 5ರಿಂದ ಜಿ.ಪಂ.ನಲ್ಲಿರುವ ಸಂಸದರ ಕಚೇರಿ ಬಳಿ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಈ ಹೋರಾಟಕ್ಕೆ ಜಿಲ್ಲೆಯ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಅವರು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net