ರೈತರ ಸಮಸ್ಯೆಗೆ ಸ್ಪಂದಿಸಲು ಜೆಡಿಎಸ್ ಬೆಂಬಲಿಸಿ

25 krp-02
Published on

ಕೆ.ಆರ್.ಪೇಟೆ: 55 ವರ್ಷಗಳ ಬಳಿಕ ಶೀಳನೆರೆ ಹೋಬಳಿಯ ವ್ಯಕ್ತಿಯೊಬ್ಬರಿಗೆ ಶಾಸಕರಾಗುವ ಅವಕಾಶ ದೊರಕಿದ್ದು, ಇದಕ್ಕೆ ನಿಮ್ಮೆಲ್ಲರ ಆಶೀರ್ವಾದ, ಸಹಕಾರ ಅಗತ್ಯ ಎಂದು ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ತಿಳಿಸಿದರು.


ತಾಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ‘ಕರ್ನಾಟಕಕ್ಕೆ ಕುಮಾರಣ್ಣ, ಕೆ.ಆರ್.ಪೇಟೆಗೆ ಮಂಜಣ್ಣ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಗ್ರಾಮೀಣ ಪ್ರದೇಶದ ರೈತನ ಮಗನೊಬ್ಬ ವಿಧಾನಸೌಧ ಪ್ರವೇಶಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಕೊಡಿಸಲು ಒಂದು ಅವಕಾಶ ಮಾಡಿಕೊಡಬೇಕು. ರೈತರು, ಬಡವರು, ನೊಂದವರ, ಕಾರ್ಯಕರ್ತರ ಕಷ್ಟ ಸುಖಗಳಿಗೆ ಸ್ಪಂದಿಸಿ ಕೆಲಸ ಮಾಡುವ ಅವಕಾಶ ದೊರಕಿದ್ದು, ನೀವೆಲ್ಲರೂ ನನಗೆ ಸಹಕಾರ ನೀಡಬೇಕು ಎಂದು ಕೋರಿದರು.


ಕುಮಾರಸ್ವಾಮಿ ಅವರ ಪಂಚರತ್ನ ಕಾರ್ಯಕ್ರಮಗಳು ಬಡವರು, ರೈತರು, ಮಹಿಳೆಯರು ಹಾಗೂ ಯುವಕರು ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಿವೆ. ನಿಮ್ಮ ಮಕ್ಕಳ ಶಿಕ್ಷಣ, ನಿಮ್ಮ ಕುಟುಂಬದ ಆರೋಗ್ಯ, ಮಹಿಳೆಯರ ಸಬಲೀಕರಣ, ಯುವಕರಿಗೆ ಉದ್ಯೋಗ, ರೈತರಿಗೆ ಗೊಬ್ಬರ, ಬಿತ್ತನೆ ಬೀಜ ಕೊಳ್ಳಲು ಸಹಾಯಧನ, ಪ್ರತಿ ಕುಟುಂಬಕ್ಕೂ 5 ಗ್ಯಾಸ್ ಸಿಲಿಂಡರ್, ಮಹಿಳೆಯರ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸಾ ಮನ್ನಾ, ಹಿರಿಯ ನಾಗರಿಕರಿಗೆ ಮಾಸಾಶನ ಹೆಚ್ಚಳ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಆದ್ದರಿಂದ ಜೆಡಿಎಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net