ರೈತರ ಹಿತ ಕಾಯಲು ಮುಂದಾಗಲಿ

28KUDLIGI2
Published on

ಕೂಡ್ಲಿಗಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಪ್ರಮಾನದ ಸಮರ್ಪಕ ಮಾಹಿತಿ ತಿಳಿಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ರೈತರ ಅಗತ್ಯಕ್ಕೆ ಅನುಗುಣವಾಗಿ ಯೂರಿಯಾ ಗೊಬ್ಬರ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕಂದು ಆಗ್ರಹಿಸಿ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಹಾಗೂ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತೇಜವರ್ಧನ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವನಹಳ್ಳಿ ಮಂಜುನಾಥ ಬಣ) ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಬಾಣದ ಕೃಷ್ಣ ಮಾತನಾಡಿ, ತಾಲೂಕಿನಲ್ಲಿ ಮುಂಗಾರಿನಲ್ಲಿ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯುತ್ತಿದ್ದು, 25600 ಎಕರೆಯಲ್ಲಿ ಬಿತ್ತನೆಯಾಗಿದೆ. ಬಿತ್ತನೆಯಾದ 20 ದಿನಕ್ಕೆ ಬೆಳೆಗೆ ಯೂರಿಯಾ ಹಾಕಬೇಕು. ರೈತರಿಗೆ 5500 ಟನ್ ಗೊಬ್ಬರದ ಅವಶ್ಯ ಇದೆ. ಆದರೆ, ಕೃಷಿ ಅಧಿಕಾರಿಗಳ ಮಾಹಿತಿ ಕೊರತೆಯಿಂದ 3450 ಟನ್ ಗೊಬ್ಬರ ಸರಬರಾಜು ಆಗಿದೆ. ಆದ್ದರಿಂದ ಕೂಡಲೇ ಅವಶ್ಯವಿರುವ ಯೂರಿಯಾ ಗೊಬ್ಬರ ತರಿಸಿ ರೈತರ ಹಿತ ಕಾಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಮನೆ ಮಹೇಶ, ಸಹ ಸಂಘಟನಾ ಕಾರ್ಯದರ್ಶಿ ಶಂಕರ್, ವಿಜಯನಗರ ಜಿಲ್ಲಾ ಅಧ್ಯಕ್ಷ ಬಣಕಾರ್ ಬಸವರಾಜ್, ಬಳ್ಳಾರಿ ಜಿಲ್ಲಾಧ್ಯಕ್ಷ ದೇವೇಂದ್ರ, ತಾಲೂಕು ಅಧ್ಯಕ್ಷ ಬಾಣದ ಮಾರುತಿ, ತಾಲೂಕು ಅಧ್ಯಕ್ಷ ಬಿ.ಎಂ.ನವೀನ್ ಕುಮಾರ್, ಉಪಾಧ್ಯಕ್ಷ ಎಮ್‌ಡಿ ಫಯಾಜ್, ಖಜಾಂಚಿ ಹೇಮಂತ್, ಹೊಂಬಾಳೆ ರೇವಣ್ಣ, ಗುಪ್ಪಾಲ್ ಕಾರಪ್ಪ, ಓಬಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net