ರೈತರ ಹಿತರಕ್ಷಣೆಗೆ ಬಿಜೆಪಿ ಬದ್ಧ

SRP_04-01(1)jpg
ಶ್ರೀರಂಗಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾತನಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ಉಮೇಶ್, ಮುಖಂಡರಾದ ಮಹೇಶ್ ತೆಂಗಿನಕಾಯಿ, ತುಳಸಿ ಮುನಿರಾಜ್ ಗೌಡ, ರಾಜೇಂದ್ರ, ಜಗದೀಶ್ ಹಿರೆಮನಿ, ಡಾ.ಸಿದ್ದ ರಾಮಯ್ಯ ಇತರರು ಇದ್ದರು.
Published on

ಶ್ರೀರಂಗಪಟ್ಟಣ: ದೇಶದ ಪ್ರತಿ ರೈತ ಕುಟುಂಬಗಳ ಹಿತಕ್ಕಾಗಿ ವಿವಿಧ 13 ಯೋಜನೆಗಳನ್ನು ಜಾರಿಗೊಳಿಸಿ, ಅನ್ಯಾಯಕ್ಕೆ ಒಳಗಾಗಿದ್ದ ಕಾರ್ಮಿಕರು, ದಲಿತರು ಸೇರಿದಂತೆ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿ ಸಮಾಜದ ಮುನ್ನೆಲೆಗೆ ತಂದಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಪಟ್ಟಣದ ಟಿಎಪಿಸಿಎಂಸ್ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಜನಸಂಕಲ್ಪ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಸತತವಾಗಿ ಅಧಿಕಾರ ಅನುಭವಿಸಿದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಕೇವಲ ಮತಕ್ಕಾಗಿ ಬಳಸಿಕೊಂಡು ಅನ್ಯಾಯ ಎಸಗಿತ್ತು. ರೈತರು ಕಾರ್ಮಿಕ ವರ್ಗ ಸೇರಿದಂತೆ ಇತರ ಹಿಂದುಳಿದವರ ಹತ್ತಿರವು ಸುಳಿಯದೆ ಕಡೆಗಣಿಸಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ರೈತರು, ತುಳಿತಕ್ಕೆ ಒಳಗಾದವರು ಸೇರಿದಂತೆ ಮಹಿಳಾ ಸಂಘಗಳ ಬಳಿ ತೆರಳಿ ಅವರ ಜೀವನ ಸುಭದ್ರಗೊಳಿಸಿದ್ದಾರೆ ಎಂದರು.

ದೇಶದ 80 ಕೋಟಿ ಕುಟುಂಬಗಳಿಗೆ 10 ಕೆಜಿ ಅಕ್ಕಿ ವಿತರಣೆ, 52 ಲಕ್ಷ ರೈತ ಕುಟುಂಬಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 10 ಸಾವಿರ ರೂ. ಸಹಾಯಧನ, 30 ಲಕ್ಷ ಬಡ ಕುಟುಂಬಗಳಿಗೆ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟೌ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ವಿಧಾನಪರಿಷತ್ ಸದಸ್ಯ ತುಳಸಿ ಮುನಿರಾಜ್‌ಗೌಡ, ಉಪಾಧ್ಯಕ್ಷ ರಾಜೇಂದ್ರ, ಜಗದೀಶ್ ಹಿರೆಮನಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್, ಮಂಡಲ ಅಧ್ಯಕ್ಷ ರಮೇಶ್, ಕಾರ್ಯದರ್ಶಿ ಸಂತೋಷ್, ಜಿಲ್ಲಾ ಉಪಾಧ್ಯಕ್ಷ ಟಿ.ಶ್ರೀಧರ, ಪುರಸಭಾ ಸದಸ್ಯೆ ಪೂರ್ಣಿಮಾ, ಮುಖಂಡರಾದ ಎಸ್.ಪಿ.ಸ್ವಾಮಿ, ಡಾ.ಇಂದ್ರೇಶ್, ಮುನಿರಾಜು, ದೇವರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net