ರೈತರಿಗೆ ಅಗತ್ಯಕ್ಕೆ ತಕ್ಕಂತೆ ಬೀಜ ವಿತರಿಸಿ

26kdl1
Published on

ಕುಂದಗೋಳ: ರೈತರಿಗೆ ಅಗತ್ಯಕ್ಕೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸರ್ಕಾರದ ರಿಯಾಯಿತಿ ದರದ ಬಿತ್ತನೆ ಬೀಜಗಳನ್ನು ಮಂಗಳವಾರ ವಿತರಿಸಿ ಅವರು ಮಾತನಾಡಿದರು.

ಮುಖಂಡ ಅರವಿಂದ ಕಟಗಿ ಮಾತನಾಡಿ, ಗುಡಗೇರಿ ಭಾಗದಲ್ಲಿ ರೈತ ಸಂಪರ್ಕ ಕೇಂದ್ರ ಹಾಗೂ ಬೀಜ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಅವರಿಗೆ ಮನವಿ ಮಾಡಿದರು. ಎಪಿಎಂಸಿ ಅಧ್ಯಕ್ಷ ಬೀರಪ್ಪ ಕುರುಬರ, ಸುರೇಶ ಗಂಗಾಯಿ, ಬಸವರಾಜ ಶಿರಸಂಗಿ, ಅಡಿವಪ್ಪ ಬಂಡಿವಾಡ, ಲಕ್ಷ್ಮಣ ಚುಳಕಿ, ಬಸವರಾಜ ತಳವಾರ, ಪ್ರಕಾಶ ಅರಳಿಕಟ್ಟಿ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net