

ಬಳ್ಳಾರಿ: ಕೃಷಿ ಪರಿಕರ ಮಾರಾಟಗಾರರು ರೈತರಿಗೆ ಉತ್ತಮ ಗುಣಮಟ್ಟದ ಬೀಜ, ರಸಗೊಬ್ಬರ, ಕೀಟನಾಶಕ ಒದಗಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ತಿರುಮಲೇಶ ಹೇಳಿದರು.
ನಗರದ ಬಿಡಿಎಎ ಸಭಾಂಗಣದಲ್ಲಿ ಬಳ್ಳಾರಿ ಹಾಗೂ ಕುರುಗೋಡು ತಾಲೂಕು ವ್ಯಾಪ್ತಿಯಲ್ಲಿ ಬರುವ ಕೃಷಿ ಪರಿಕರ ಮಾರಾಟಗಾರರ ಜತೆ ನಡೆದ ಸಭೆಯಲ್ಲಿ ಮಾತನಾಡಿದರು. ಅಧಿಕೃತ ಕಂಪನಿಗಳ ಕೃಷಿ ಪರಿಕರಗಳನ್ನು ಮಾತ್ರ ಮಾರಾಟ ಮಾಡಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು. ಒಂದು ವೇಳೆ ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.