ರೈತರಿಗೆ ಕಿಸಾನ್ ಸಮ್ಮಾನ ಹಣ ವಿತರಿಸಿ

11-hvr-04
Published on

ಹಾವೇರಿ: ಲಾಕ್​ಡೌನ್​ನಿಂದ ಸಂಕಷ್ಟಕ್ಕೊಳಗಾದ ರೈತರ ನೆರವಿಗಾಗಿ ಪ್ರಧಾನಿ ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರೋತ್ಸಾಹಧನವನ್ನು ಮುಂಗಡವಾಗಿ ಬಿಡುಗಡೆ ಮಾಡಿದ್ದಾರೆ. ಆದರೆ, ಈ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಈ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಕುರಿತು ಅಪರ ಜಿಲ್ಲಾಧಿಕಾರಿ ಎಂ. ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಿರುವ ಜೆಡಿಎಸ್ ಪದಾಧಿಕಾರಿಗಳು, ಕಿಸಾನ್ ಸಮ್ಮಾನ್ ಹಣ ತಗೆಯಲು ಬರದಂತೆ ಬ್ಯಾಂಕ್​ನವರು ರೈತರ ಖಾತೆಗಳನ್ನು ಲಾಕ್ ಮಾಡಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ವಿಧಿಸಿರುವ ಲಾಕ್​ಡೌನ್ ತೆಗೆದ ಬಳಿಕ ಹಣ ಕೊಡುತ್ತೇವೆ ಎನ್ನುತ್ತಾರೆ. ಈಗಾಗಲೇ ಮುಂಗಾರು ಬಿತ್ತನೆ ಪ್ರಾರಂಭವಾಗಿದ್ದು, ರೈತರಿಗೆ ಹಣದ ಅಗತ್ಯತೆ ಇದೆ. ಆದ್ದರಿಂದ ಕೂಡಲೆ ಹಣ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.

ಪದಾಧಿಕಾರಿಗಳಾದ ಎಸ್.ಎಸ್. ಕಳ್ಳಿಮನಿ, ಬಸವರಾಜ ಹಾದಿ, ಕೆ.ಎಂ. ಸುಂಕದ, ಅಮೀರಜಾನ ಬೇಪಾರಿ, ಮಹಾಂತೇಶ ಬೇವಿನಹಿಂಡಿ ಇನ್ನಿತರರು ಮನವಿ ಸಲ್ಲಿಸುವ ಸಮಯದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net