ರೈತರಿಗೆ ತೆಂಗಿನ ಸಸಿಗಳ ವಿತರಣೆ

01M.D.R.3
Published on

 ಮದ್ದೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಭಾನುವಾರ ತಾಲೂಕಿನ ಕೊಪ್ಪದಲ್ಲಿ ರೈತರಿಗೆ ತೆಂಗಿನ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮನ್‌ಮುಲ್ ಮಾಜಿ ನಿರ್ದೇಶಕ ಕುಮಾರ್‌ಕೊಪ್ಪ ಮಾತನಾಡಿ, ಸಚಿವ ಎನ್.ಚಲುವರಾಯಸ್ವಾಮಿ ಜಿಲ್ಲೆಯ ಅಭಿವೃದ್ಧಿಗೆ ಅಪಾರ ಶ್ರಮಿವಹಿಸಿದ್ದಾರೆ. ಈ ಮೂಲಕ ಜಿಲ್ಲೆಯ ಜನರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ಕ್ರಾಂತಿಸಿಂಹ ಮಾತನಾಡಿ, ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಹಂತ ಹಂತವಾಗಿ ಬೆಳೆದು ಇಂದು ಚಲುವರಾಯಸ್ವಾಮಿ ಅವರು ಕೃಷಿ ಸಚಿವರಾಗಿ ಜನಪ್ರಿಯ ನಾಯಕರಾಗಿದ್ದಾರೆ. ಜನರ ಹಾಗೂ ರೈತರ ಪರವಾಗಿ ಅಪಾರ ಕಾಳಜಿ ಹೊಂದಿರುವುದು ಪ್ರಶಂಸನೀಯ ಎಂದರು.

ಕೃಷಿಕ ಸಮಾಜದ ನಿರ್ದೇಶಕರಾದ ತರೀಕೆರೆ ಟಿ.ಎಂ.ರಾಜಶೇಖರ್, ಕೊಪ್ಪದ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ರಮೇಶ್ ಕೊಪ್ಪ, ಮುಖಂಡರಾದ ಬಿದರಕೋಟೆ ಯೋಗೇಶ್, ಜಿ.ಆರ್.ನವೀನ್‌ಕುಮಾರ್, ಶಂಕರಣ್ಣ, ತರೀಕೆರೆ ಅನಿಲ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net