ರೈತರಿಗೆ ಯೋಜನೆಗಳು ಸಮರ್ಪಕ ತಲುಪಲಿ

21-july-hdl--01
Published on

ಹೂವಿನಹಡಗಲಿ: ರೈತರ ದಿನವನ್ನು ನಾಡಹಬ್ಬವಾಗಿ ಆಚರಿಸಬೇಕೆಂದು ಆಗ್ರಹಿಸಿ ಉತ್ತಂಗಿಯಲ್ಲಿ ಉಪತಹಸೀಲ್ದಾರ್ ಎಚ್.ಎಂ.ಶ್ವೇತಾಗೆ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದಿಂದ ಮನವಿ ಸಲ್ಲಿಸಲಾಯಿತು.

ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ.ಸಿದ್ದೇಶ ಮಾತನಾಡಿ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕೃಷಿ ಮಾಡುವುದರ ಮೂಲಕ ಸಾಕಷ್ಟು ರೈತ ಕುಟುಂಬಗಳು ಜೀವನ ಸಾಗಿಸುತ್ತಿವೆ. ಆದರೆ, ಸರ್ಕಾರಗಳು ರೈತರಿಗಾಗಿ ಜಾರಿಗೊಳಿಸಿರುವ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ದೊರಕುತ್ತಿಲ್ಲ. ಇದರಿಂದಾಗಿ ರೈತರು ಸಾಲ ಮಾಡಿಕೊಂಡು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಗ್ರಾಪಂ ಅಧ್ಯಕ್ಷೆ ಗೀತಾ ದಾನನಗೌಡ, ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ, ಕಾರ್ಯದರ್ಶಿಧ ಭದ್ರಗೌಡ, ಸಹಕಾರ್ಯದರ್ಶಿ ವೀರಣ್ಣ, ಸದಸ್ಯರಾದ ಪ್ರಕಾಶ್, ಸೋಮಶೇಖರ, ಬಸವರಾಜ, ನಾಗರಾಜ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಬೆನ್ನೂರು ಹಾಲೇಶ್ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net