ರೈತರಿಗೆ ವಕ್ಪ್ ನೋಟಿಸ್ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ

IMG-20241105-WA0032
Published on

ಚಾಮರಾಜನಗರ: ವಕ್ಫ್ ಆಸ್ತಿಯ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಜಮೀನುಗಳಿಗೆ ನೋಟಿಸ್ ನೀಡುತ್ತಿ ರುವುದನ್ನು ಖಂಡಿಸಿ ಹಾಗೂ ವಕ್ಪ್ ಸಚಿವ ಜಮೀರ್ ಅಹಮದ್ ರಾಜೀನಾಮೆ ಒತ್ತಾಯಿಸಿ ಬಿಜೆಪಿಯ ಜಿಲ್ಲಾ ಸಮಿತಿವತಿಯಿಂದ ನಗರದಲ್ಲಿ ‌ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನ ಆವರಣದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಹೊತ್ತು ಪ್ರತಿಭಟನೆ ನಡೆಸಿ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರಿಗೆ ಮನವಿ ಸಲ್ಲಿಸಲಾಯಿತು

ಮೆರವಣಿಗೆ ಯುದ್ಧಕ್ಕೂ ಬಿಜೆಪಿ ಕಾರ್ಯಕರ್ತರು  ಭ್ರಷ್ಟ ಸಿದ್ದರಾಮಯ್ಯ, ಜಮೀರ್ ಅಹಮದ್‌ಗೆ ಧಿಕ್ಕಾರ, ಕಾಂಗ್ರೆಸ್ ತೊಲಗಲಿ, ರೈತರ ಜಮೀನು ಕಬಳಿಸಿದ ವಕ್ಸ್ ಗೂಂಡಾಗಿರಿಗೆ ಧಿಕ್ಕಾರ, ಕಾಂಗ್ರೆಸ್ ಲ್ಯಾಂಡ್ ಜಿಹಾದ್‌ಗೆ ಧಿಕ್ಕಾರ, ಪ್ರಾಣ ಕೊಟ್ಟೆವು ಭೂಮಿ ಬಿಡೆವು, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ- ಕ್ಕೆ ಧಿಕ್ಕಾರ, ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟ ಸಿದ್ದರಾಮಯ್ಯಗೆ ಧಿಕ್ಕಾರ ಎಂದು ಘೋಷನೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್‌ ಮಾತನಾಡಿ, ವಿಜಯಪುರ ಜಿಲ್ಲೆಯ ಹೊನ್ನಾವಡದ ರೈತರ 1500 ಎಕರೆ ಜಮೀನನ್ನು ವಕ್ಷ ಆಸ್ತಿಯೆಂದು ಘೋಷಿಸಿ ತಹಸೀಲ್ದಾರ್‌ರಿಂದ ಪುಷ್ಠಿಕರಿಸಿ ನೋಟಿಸ್ ನೀಡಲಾಗಿದೆ. ಅಲ್ಲದೇ ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಸ್ ಪ್ರತಿಪಾದಿಸುತ್ತಿದೆ. ಸವಣೂರು ತಾಲೂಕಿನ ಕಡಕೊಳ ಗ್ರಾಪಂ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಸ್ ಬೋರ್ಡ್ ಮುಂದಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನಕ್ಕೆ ಸೇರಿದ 6 ಗುಂಟೆ ಜಮೀನು ವಕ್ಸ್ ಆಸ್ತಿ ಎಂದು ನಮೂದಾಗಿದೆ ಎಂದರು.

ವಿಜಯಪುರ ಜಿಲ್ಲೆಯ 1500 ವರ್ಷ ಇತಿಹಾಸವಿರುವ ಸಿಂಧಗಿಯ ವಿರಕ್ತ ಮಠವೂ ವಕ್ಸ್ ಆಸ್ತಿ ಎಂದು ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. 2 ಸಾವಿರ ವರ್ಷ ಇತಿಹಾಸವಿರುವ ಸೋಮನಾಥೇಶ್ವರ ದೇವಸ್ಥಾನವೂ ವಕ್ಟ್ ಆಸ್ತಿ ಎಂಬ ಹಕ್ಕು ಪ್ರತಿಪಾದನೆ ವಕ್ಸ್ ಮಂಡಳಿಯಿಂದ ಬರುತ್ತಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಹಾಗೂ ಕಾಳಗಿ ತಾಲೂಕಿನ ಪೂರ್ವಜನರಿಂದ ಬಂದ ಜಮೀನುಗಳನ್ನು ಅನುಭವಿಸುತ್ತಿದ್ದ ರೈತರಿಗೂ ವಕ್ಸ್ ಆಸ್ತಿ ಎಂದು ತಹಸೀಲ್ದಾರ್‌ರಿಂದ ನೋಟಿಸ್ ನೀಡಲಾಗಿದೆ. ವಕ್ ಬೋರ್ಡ್‌ನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿ ಸಾಮರಸ್ಯ ಹದಗೆಡಲು ಕಾರಣವಾಗಿದೆ ಎಂದು ಆರೋಪಿಸಿದರು. ರಾಜ್ಯದ ರೈತರ ಹಿತದೃಷ್ಟಿಯಿಂದ ತನ್ನ ನಿಲುವನ್ನು ತೆಗೆದುಕೊಳ್ಳಬೇಕಾಗಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ ಎಂದು ಆರೋಪಿಸಿದರು.

ದೀನ-ದಲಿತರ ಬಡವರ ಜಮೀನುಗಳಿಗೆ ನೋಟಿಸ್ ನೀಡಿ ಅವರಿಂದ ಭೂಮಿ ಕಿತ್ತುಕೊಳ್ಳುತ್ತಿದೆ. ಹಲವಾರು ದಶಕಗಳಿಂದ ಭೂಮಿಯ ಒಡೆತನ ಹೊಂದಿರುವ ರೈತರಿಗೆ ನೋಟಿಸ್ ನೀಡಿ ವಕ್ಪ್ ಆಸ್ತಿ ಎನ್ನುತ್ತಿದ್ದಾರೆ. ಸರ್ಕಾರದ ಈ ನಡೆಯನ್ನು ಬಿಜೆಪಿ ಉಗ್ರವಾಗಿ ಪ್ರತಿಭಟನೆ ನಡೆಸಿದ ಪರಿಣಾಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಲಾಗುತ್ತದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಕೇವಲ ಬಾಯಿ ಮಾತನಲ್ಲಿ ಆಗದೇ. ಆದಷ್ಟು ಬೇಗ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ವಕ್ಪ್ ಸಚಿವ ಜಮೀರ್ ಅಹಮದ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಲ್ಲಿ ಕ್ಷಮೆ ಕೇಳಬೇಕು ಹಾಗೂ ಸ್ಪಷ್ಟನೆ ನೀಡಬೇಕು.ಇನ್ನು ಮುಂದೆ ಯಾವುದೇ ವಕ್ಸ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶವನ್ನು ಹೊರಡಿಸಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಗೆಜೆಟ್ ನೋಟಿಫಿಕೆಶನ್ ಅನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರವು ತರುತ್ತಿರುವ ವಕ್ಸ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರವು ಮುಂದಿನ ಅಧಿವೇಶನದ ಒಮ್ಮತದಿಂದ ನಿರ್ಣಯವನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು ಇಲ್ಲದಿದ್ದರೆ ಬಿಜೆಪಿ ನಿರಂತರ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ನಗರಸಭಾ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಮಮತ,  ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ,  ಓಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ನೂರೊಂದು ಶೆಟ್ಟಿ, ಓಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಪಿ.ವೃಷಬೇಂದ್ರಪ್ಪ, ಮೂಡ್ನಾಕೂಡುಪ್ರಕಾಶ್,  ಹೊನ್ನೂರು ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷರಾದ ಮಂಗಲ ಶಿವಕುಮಾರ್, ವಿರಾಟ್ ಶಿವು, ನಟರಾಜು, ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್ , ಚಾಮುಲ್ ಅಧ್ಯಕ್ಷ ನಾಗೇಂದ್ರ,

ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷ ಮಲೆಯೂರು ಕಮಲಮ್ಮ, ಡಾ.ಎ.ಆರ್.ಬಾಬು, ನಗರ ಮಂಡಲ ಅಧ್ಯಕ್ಷ ಶಿವರಾಜ್, ಜಿಲ್ಲಾ ಎಸ್ ಟಿ ಮೋರ್ಚಾದ ಅಧ್ಯಕ್ಷ ಚಂದ್ರಶೇಖರ,  ಎಸ್ ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಮೂಡಹಳ್ಳಿ ಮೂರ್ತಿ , ಮಲ್ಲೇಶ್, ಜಿ.ಡಿಎಲ್ ಸುರೇಶ್, ನವೀನ್ ಮೌರ್ಯ, ಕಬ್ಬಹಳ್ಳಿ ರೇವಣ್ಣ, ವೀರಭದ್ರಸ್ವಾಮಿ, ಬಾಲಸುಬ್ರಹ್ಮಣ್ಯಂ, ಕೆ..ಆರ್.ಲೋಕೇಶ್, ಶಿವಣ್ಣ ತಗಡಪುರ ರೇವಣ್ಣ, ಬುಲೆಟ್ ಚಂದ್ರು, ಮಲ್ಲಿಕಾರ್ಜುನ ಸ್ವಾಮಿ, ಎಪಿಎಂಸಿ ನಿರ್ದೇಶಕ ಮಹದೇವಪ್ರಸಾದ್ , ರಾಮಸಮುದ್ರ ಶಿವಣ್ಣ, ಕೂಸಣ್ಣ, ಶಿವಪುರ ಮಂಜ,  ಸೂರ್ಯಬಾಲರಾಜ್, ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net