ರೈತರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ

24 HANUR 3
Published on

ಹನೂರು: ರೈತರು ಪ್ರಶ್ನಿಸುವ ಗುಣವನ್ನು ಬೆಳೆಸಿಕೊಳ್ಳುವುದರ ಮೂಲಕ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ತಿಳಿದು ಪ್ರಯೋಜನ ಪಡೆದುಕೊಂಡು ಕೃಷಿಯಲ್ಲಿ ಅಭಿವೃದ್ಧಿ ಹೊಂದಬೇಕು ಎಂದು ಹಸಿರು ಸೇನೆ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.


ತಾಲೂಕಿನ ರಾಮಾಪುರ ಹೋಬಳಿಯ ಹೊಸದೊಡ್ಡಿ ಗ್ರಾಮದಲ್ಲಿ ಬುಧವಾರ ಹಸಿರು ಸೇನೆ ಮತ್ತು ರೈತ ಸಂಘದ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.


ರೈತ ದೇಶದ ಬೆನ್ನೆಲುಬು. ಆದರೆ ಹನೂರು ಭಾಗದಲ್ಲಿ ರೈತರು ಇತ್ತೀಚೆಗೆ ಸಮರ್ಪಕ ವಿದ್ಯುತ್, ನೀರಾವರಿ ಸೇರಿದಂತೆ ತುಂಬಾ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸರ್ಕಾರದ ಸವಲತ್ತುಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಇದರಿಂದ ಕೃಷಿ ಕಾಯಕದಲ್ಲಿ ತುಂಬಾ ತೊಂದರೆಯನ್ನು ಅನುಭವಿಸಬೇಕಾದ ಸ್ಥಿತಿ ಇದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ಮುಂದಾಗಬೇಕು. ಇದರಿಂದ ಕೃಷಿಯಲ್ಲಿ ಅಭಿವೃದ್ಧಿ ಹೊಂದಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಹಸಿರು ಸೇನೆ ಮತ್ತು ರೈತ ಸಂಘದ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ, ಕಾರ್ಯದರ್ಶಿ ಶಾಂತಕುಮಾರ್, ರೈತ ಮುಖಂಡರಾದ ಉಮೇಶ್, ಶ್ರೀನಿವಾಸ್, ಸಂಪತ್‌ಕುಮಾರ್, ರಘು ಹಾಗೂ ಇನ್ನಿತರರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net