ರೈಲಿನಡಿಗೆ ಸಿಲುಕಿ ಇಬ್ಬರು ಸಾವು

IMG-20210821-WA0008
Published on

ಮಂಗಳೂರು: ನಗರದ ಮಹಾಕಾಳಿ ಪಡ್ಪು ಬಳಿ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಸ್ಥಳೀಯ ನಿವಾಸಿಗಳಾದ ವಸಂತಿ ಹಾಗೂ ಪ್ರೇಮ ಮೃತಪಟ್ಟವರು. ಮನೆಯಿಂದ ಬೀಡಿ ಕೊಂಡು ಹೋಗುತ್ತಿದ್ದಾಗ ರೈಲ್ವೆ ಹಳಿ ದಾಟುತ್ತಿದ್ದಾಗ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net