ರೈಲಿನಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಕಳವು ಮಾಡುತ್ತಿದ್ದ ಕಳ್ಳನ ಬಂಧನ

rail-4
Published on

ಮೈಸೂರು: ರೈಲಿನಲ್ಲಿ ಪ್ರಯಾಣಿಕರ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಮೈಸೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಸರಸ್ವತಿಪುರಂ ನಿವಾಸಿ ಕೆ.ಸುಧೀಂದ್ರ ಬಂಧಿತ ಆರೋಪಿ. ಈತನಿಂದ 10.28 ಲಕ್ಷ ರೂ. ವೌಲ್ಯದ 9 ಮೊಬೈಲ್ ಮತ್ತು 8 ಲ್ಯಾಪ್‌ಟಾಪ್ ವಶಪಡಿಸಿಕೊಳ್ಳಲಾಗಿದೆ. ಈತ ಏ.3 ರಂದು ನಗರದ ರೆಲ್ವೆ ನಿಲ್ದಾಣದಲ್ಲಿ ಲ್ಯಾಪ್‌ಟಾಪ್ ಬ್ಯಾಗ್ ಹಿಡಿದುಕೊಂಡು ಶಂಕಾಸ್ಪ ದವಾಗಿ ತಿರುಗಾಡುತ್ತಿದ್ದ ಸಂದರ್ಭ ವಿಚಾರಣೆಗೆ ಒಳಪಡಿಸಿದಾಗ ಕಳವು ಕೃತ್ಯ ಬಯಲಿಗೆ ಬಂದಿದೆ.

ಪುತ್ತೂರು ರೈಲ್ವೆ ನಿಲ್ದಾಣದಿಂದ ಮೈಸೂರಿಗೆ ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಾ.13 ರಂದು ಬಂದಿದ್ದ ಪ್ರಯಾಣಿಕರಾದ ಟ್ರೆಸಿಯಾ ಲವಿಟ ಬಳಿ ಇದ್ದ ಲ್ಯಾಪ್‌ಟಾಪ್ ಬ್ಯಾಗ್ ಕಳುವಾಗಿತ್ತು. ಟ್ರೆಸಿಯಾ ಲವಿಟ ನಗರದ ರೈಲ್ವೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರು ಶಂಕಾಸ್ಪದ ವ್ಯಕ್ತಿಗಳ ಮೇಲೆ ಕಣ್ಣು ಇರಿಸಿದ್ದರು. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net