ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಿಲ್ಲ

18 HANUR 4
?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹನೂರು: ಹೆಜ್ಜಾಲ-ಚಾಮರಾಜನಗರ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಳ್ಳುವ ಸಂಬಂಧ 4 ಬಾರಿ ಪತ್ರ ಬರೆದಿದ್ದೇನೆ. ಆದರೆ, ರಾಜ್ಯ ಸರ್ಕಾರ ಅನುಮತಿ ನೀಡುತ್ತಿಲ್ಲ. ಆದರೂ ಪ್ರಯತ್ನ ಮಾಡುತ್ತಿದ್ದೇನೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಶುಕ್ರವಾರ ಮ.ಬೆಟ್ಟಕ್ಕೆ ತೆರಳುವ ಮುನ್ನು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಜ್ಜಾಲ-ಚಾಮರಾಜನಗರ ರೈಲ್ವೆ ಯೋಜನೆ ಜನರ ಬಹು ದಿನಗಳ ಬೇಡಿಕೆ. ಹಾಗಾಗಿ ಈ ಯೋಜನೆಯನ್ನು ಆರಂಭಿಸಬೇಕು ಎನ್ನುವುದು ನನ್ನ ಆಶಯ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಈವರೆಗೂ 4 ಬಾರಿ ಪತ್ರ ಬರೆದಿದ್ದೇನೆ. ಆದರೆ, ತಕ್ಷಣಕ್ಕೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಮೈಸೂರು-ಕುಶಾಲನಗರ ರೈಲ್ವೆ ಯೋಜನೆಯನ್ನು ಜಾರಿಗೊಳಿಸುವ ಸಂಬಂಧವೂ ಪತ್ರ ಬರೆದಿದ್ದೇನೆ. ಈ ಯೋಜನೆಯನ್ನು ಸಹ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಇನ್ನು ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಳ್ಳಲು ನೀಡುವ ಜಾಗದ ಸ್ವಾಧೀನಕ್ಕೆ ಶೇ.50 ಪರಿಹಾರ ನೀಡಲಾಗುವುದು ಎಂದು ಇತ್ತೀಚೆಗೆ ಪತ್ರದ ಮೂಲಕ ತಿಳಿಸಿದ್ದೇನೆ. ಆದರೆ, ರಾಜ್ಯ ಸರ್ಕಾರ ಈ ಪ್ರಸ್ತಾಪನೆಗೆ ಅನುಮತಿ ನೀಡುತ್ತಿಲ್ಲ. ಆದರೂ ಯೋಜನೆಯನ್ನು ಜಾರಿಗೊಳಿಸಲು ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಜನ ಸಾಮಾನ್ಯರಿಗೂ ತಲುಪಿಸುವ ನಿಟ್ಟಿನಲ್ಲಿ ನಾನು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದೇನೆ. ನನಗೆ ನೀಡಿರುವ 2 ಇಲಾಖೆಯ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದೇನೆ. ದೇಶದ ಸರ್ವಾಂಗೀಣ ಅಭಿವೃದ್ಧಿ ನರೇಂದ್ರ ಮೋದಿ ಅವರ ಸಂಕಲ್ಪ, ಅದರಂತೆಯೇ ಹೆಜ್ಜೆ ಹಾಕೋಣ ಎಂದರು.

ಶಾಸಕ ಎಂ.ಆರ್.ಮಂಜುನಾಥ್, ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಎಸ್.ದತ್ತೇಶ್‌ಕುಮಾರ್, ಮುಖಂಡರಾದ ನಿಶಾಂತ್, ವೆಂಕಟೇಗೌಡ, ಶ್ರೀನಿವಾಸ್, ಸಿದ್ದಪ್ಪ, ಮಂಜೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net