

ಚಿಕ್ಕಮಗಳೂರು: ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ಜನರಿಗೆ ವೈದ್ಯರು ಹಾಗೂ ಕೆಳ ಹಂತದ ಸಿಬ್ಬಂದಿ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಅವರಲ್ಲಿ ಕಾಯಿಲೆ ಗುಣಮುಖವಾಗುವ ಬಗ್ಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಹೊರ ರೋಗಿಗಳ ವಿಭಾಗದ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ನಮಗಿರುವ ಕಾಯಿಲೆಯಿಂದ ಗುಣಮುಖ ಆಗಬಹುದು ಎಂಬ ಭಾವನೆಯಿಂದ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಎಲ್ಲ ರೋಗಗಳಿಗೂ ಚಿಕಿತ್ಸೆ ನೀಡುವುದು ತುಂಬಾ ಕಷ್ಟದ ಕೆಲಸ. ಆದರೂ ಸಹ ರೋಗಿಗಳಲ್ಲಿ ಆತ್ಮಸ್ಥೈರ್ಯ ತುಂಬಿದರೆ ಅರ್ಧದಷ್ಟು ಕಾಯಿಲೆ ಗುಣಮುಖವಾಗುತ್ತದೆ ಎಂದರು.
ಯಾವುದೇ ರೋಗಿಗೆ ತೊಂದರೆ ಆದಲ್ಲಿ ಅವರ ಕುಟುಂಬಸ್ಥರು ಕೆಟ್ಟ ರೀತಿಯಲ್ಲಿ ವರ್ತಿಸುತ್ತಾರೆ. ಅಂತಹ ಸಂದರ್ಭದಲ್ಲಿ ವೈದ್ಯರು ತಾಳ್ಮೆ ಕಳೆದುಕೊಳ್ಳಬಾರದು. ಸಹನೆಯಿಂದ ವರ್ತಿಸಬೇಕು. ಬಡವರಿಗೂ ಗೌರವ ನೀಡಬೇಕು, ಅವರಿಗೂ ಒಳ್ಳೆಯ ಸೇವೆ ನೀಡಬೇಕು ಎಂದು ಹೇಳಿದರು.
ವೈದ್ಯರಿಗೆ ಹಾಗೂ ಪೋಲೀಸರಿಗೆ ಕೆಲಸದ ಅವಧಿ ಎಂಬುದಿಲ್ಲ. ದಿನದ ೨೪ ಗಂಟೆಗಳ ಕಾಲ ಕೆಲಸ ಮಾಡುವ ಸಂದರ್ಭ ಬರುತ್ತದೆ. ಸಮಾಜ ಅವರಿಗೂ ಕೂಡ ಗೌರವ ಕೊಡಬೇಕು. ಅದೇ ರೀತಿ ಪೌರ ಸೇವಾ ನೌಕರರಿಗೂ ಗೌರವ ಕೊಡಬೇಕು ಎಂದರು.
ನಾವುಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇz್ದೆÃವೆ. ಜನರಿಂದ ಆಯ್ಕೆಯಾಗಿz್ದÉÃವೆ. ಸೇವೆ ಮಾಡುವ ಉದ್ಧೇಶದಿಂದ ಈ ಕ್ಷೇತ್ರಕ್ಕೆ ಬರಬೇಕು. ಜನ ಸೇವೆ ನಮ್ಮ ಕರ್ತವ್ಯ ಆಗಬೇಕು. ಪ್ರಜೆಗೋಸ್ಕರ ಕೆಲಸ ಮಾಡಬೇಕು. ಅಭಿವೃದ್ಧಿ ವಿಚಾರದಲ್ಲಿ ಪಕ್ಷ ಬೇಧ ಮಾಡಬಾರದು ಎಂದು ಕಿವಿಮಾತು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಎಜುಕೇಷನ್ ಹಬ್ ಮಾಡಲು ಪೂರಕವಾದ ವಾತಾವರಣ ಇದೆ. ಬೇಲೂರು- ಚಿಕ್ಕಮಗಳೂರು ರಾಷ್ಟಿçÃಯ ಹೆದ್ದಾರಿ ಕಾಮಗಾರಿಯ ಸಮಗ್ರ ಯೋಜನಾ ವರದಿ ಸಿದ್ಧವಾಗಿದೆ. ಬೇಲೂರು - ಹಾಸನ ರೈಲ್ವೆ ಕಾಮಗಾರಿಯನ್ನು ಚುರುಕುಗೊಳಿಸಬೇಕು. ಈ ಸಂಬAಧ ರೈಲ್ವೆ ಸಚಿವರೊಂದಿಗೆ ಮಾತುಕತೆ ನಡೆಸಬೇಕು ಎಂದು ತಿಳಿಸಿದರು.
ಏರ್ ಸ್ಟಿçಪ್ ನಿರ್ಮಾಣ ಮಾಡಬೇಕು. ಇದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಆಗಮಿಸಲಿದ್ದಾರೆ. ಜತೆಗೆ ಖಾಸಗಿ ವಿಮಾನಗಳು ಕೂಡ ಬಂದು ಹೋಗಲು ಅನುಕೂಲವಾಗಲಿದೆ ಎಂದರು.
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ. ಈ ಜಾಗದಲ್ಲಿ ಅತಿಥಿ ಉಪನ್ಯಾಸಕರನ್ನು ತುಂಬುವ ಕೆಲಸ ಸರ್ಕಾರ ಮಾಡುತ್ತಿದೆ. ಆದರೆ ಎರಡು ಬಾರಿ ಪ್ರಕಟಣೆ ಹೊರಡಿಸಿದರೂ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಗಳು ಬಂದಿಲ್ಲ. ಹಾಗಾಗಿ ಖಾಯಂ ಆಗಿ ಹುದ್ದೆಗಳನ್ನು ತುಂಬಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಇಂದು ಹೊರ ರೋಗಿಗಳ ಕಟ್ಟಡ ಉದ್ಘಾಟನೆಯಾಗಿದೆ. ಮೆಡಿಕಲ್ ಕಾಲೇಜಿಗೆ ಹಣದ ಅವಶ್ಯಕತೆ ಇದ್ದರಿಂದ ಕಾಂಗ್ರೆಸ್ ಸರ್ಕಾರ ಬಂದ ನಂತರ ೩೮ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಆರೋಗ್ಯ, ಶಿಕ್ಷಣದ ಕಡೆಗೆ ಹೆಚ್ಚಿನ ಒತ್ತು ನೀಡಿ ಅನುದಾನ ಬಿಡುಗಡೆ ಮಾಡುತ್ತಿದೆ ಎಂದರು.
ಶೃAಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಭದ್ರಾ ಕಾಡ ಅಧ್ಯಕ್ಷ ಡಾ. ಅಂಶುಮAತ್, ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ಚಿಕ್ಕಮಗಳೂರು ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಜಿಪಂ ಸಿಇಒ ಎಚ್.ಎಸ್. ಕೀರ್ತನಾ, ಎಸ್‌ಪಿ ವಿಕ್ರಮ ಅಮಟೆ, ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಡೀನ್ ಡಾ. ಹರೀಶ್ ಉಪಸ್ಥಿತರಿದ್ದರು.