ರೋಟರಿ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿ

IMG-20250105-WA0012
Published on

ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಬಹಳ ಯಶಸ್ವಿಯಾಗಿ ನಡೆಯಿತು.

ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 235 ಮಂದಿ ತಪಾಸಣೆ ಮಾಡಿಸಿಕೊಂಡರು. 80 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಂಬತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ  ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.

ರೋಟರಿ ಸಂಸ್ಥೆ ಅಧ್ಯಕ್ಷ   ರಾಮಸಮುದ್ರ ನಾಗರಾಜು  ಮಾತನಾಡಿ,  ರೋಟರಿ ಸಂಸ್ಥೆಯು  ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು,  ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ  ಶಿಬಿರದ ಪ್ರಯೋಜನ ಪಡೆಯುತ್ತಿರುವುದು ತುಂಬಾ ಸಂತಸವಾಗಿದ್ದು, ಮುಂದಿನ ಶಿಬಿರದ  ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ರೋಟರಿ ಸಂಸ್ಥೆಯ ಕಾರ್ಯದರ್ಶಿ ಎಚ್.ಎಂ.ಗುರುಸ್ವಾಮಿ, ಸಂಸ್ಥಾಪಕ ಸದಸ್ಯ ಶ್ರೀನಿವಾಸಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಚಂದ್ರಪ್ರಭಜೈನ್,  ಮುಂದಿನ ಸಾಲಿನ ಅಧ್ಯಕ್ಷ ಕಾಗಲವಾಡಿ ಚಂದ್ರು, ಕಾರ್ಯದರ್ಶಿ ಕೆಂಪನಪುರ ಸಿದ್ದರಾಜು, ಉಪಾಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಕೆಂಪನಪುರ ಮಹದೇವಸ್ವಾಮಿ,.ಯೋಗಣ್ಣ, ಎಸ್.ಸುರೇಶ್,

ಪಿಆರ್ ಓ  ವಿಜಯಕಾಂತ್  ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net