

ಚಿತ್ರದುರ್ಗ: ರೋಟರಿ ಕ್ಲಬ್ ಚಿನ್ಮೂಲಾದ್ರಿಯಿಂದ ನಗರದ ಎಸ್‌ಆರ್‌ಬಿಎಂಎಸ್ ರೋಟರಿ ಬಾಲಭವನದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರ ಅಭಿಯಂತರರ ಹಾಗೂ ವಿಶ್ವ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.
ಇದೇ ವೇಳೆ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಕೆ.ಪ್ರಭುದೇವ ಅವರನ್ನು ಸನ್ಮಾನಿಸಲಾಯಿತು. ಕ್ಲಬ್‌ನ ಅಧ್ಯಕ್ಷ ಶಂಕರಪ್ಪ, ಕಾರ್ಯದರ್ಶಿ ಲಕ್ಷ್ಮಿಕಾಂತ, ಬಸವೇಶ್ವರ ಪುನರ್ಜ್ಯೋತಿ ಐ ಬ್ಯಾಂಕ್‌ನ ಸ್ಥಾಪಕ ಅಧ್ಯಕ್ಷೆ ಗಾಯತ್ರಿ ಶಿವರಾಂ ಇತರರಿದ್ದರು.