ರೋಟರಿ ಕ್ಲಬ್‌ನಿಂದ ಹಲವು ಸಾಮಾಜಿಕ ಕಾರ್ಯ

RemasterDirector_1a5c03258
RemasterDirector_1a5c03258
Published on

ಪಿರಿಯಾಪಟ್ಟಣ: ರೋಟರಿ ಕ್ಲಬ್ ಪಿರಿಯಾಪಟ್ಟಣ ಐಕಾನ್ಸ್‌ಗೆ ರೋಟರಿ 3181ರ ಜಿಲ್ಲಾ ಪ್ರಾಂತಪಾಲ ವಿಕ್ರಂದತ್ತ ಅವರ ಅಧಿಕೃತ ಭೇಟಿ ಅಂಗವಾಗಿ ತಾಲೂಕಿನ ಹಲವೆಡೆ ಶೈಕ್ಷಣಿಕ ಚಟುವಟಿಕೆಗೆ ಸಂಬಂಧಿಸಿದ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಬೆಕ್ಕರೆ ಗ್ರಾಮದ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ರೋಟರಿ ಪಿರಿಯಾಪಟ್ಟಣ ಐಕಾನ್ಸ್ ಸದಸ್ಯರಾದ ಡಿ.ರಮೇಶ್ ಹಾಗೂ ಬಿ.ಎಸ್.ಸತೀಶ್ ಆರಾಧ್ಯ ಅವರ ಸಹಯೋಗದಲ್ಲಿ ಚೇರ್, ಮ್ಯಾಟ್, ಬಾಲ್, ಸ್ಲೇಟ್ ಸೇರಿದಂತೆ ಹಲವು ಪರಿಕರಗಳನ್ನು ವಿತರಿಸಲಾಯಿತು.

ಈ ವೇಳೆ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗಳಿಂದ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸಿ ಈಚೆಗೆ ನಿವೃತ್ತಿಗೊಂಡ ಪಂಕಜಮ್ಮ ಅವರನ್ನು ಸನ್ಮಾನಿಸಲಾಯಿತು.

ಬಳಿಕ ಬೆಟ್ಟದಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ರೋಟರಿ ಐಕಾನ್ಸ್ ಕಾರ್ಯದರ್ಶಿ ಬಿ.ಎಸ್.ಪ್ರಸನ್ನಕುಮಾರ್ ಹಾಗೂ ಅವರ ಸಹೋದರರ ಮಾಲೀಕತ್ವದ ಬೆಂಗಳೂರಿನ ಕ್ಯಾಮ್ಸ್ ಡಾಟಾ ಟೆಕ್ನಾಲಜಿಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೂತನವಾಗಿ ನಿರ್ಮಿಸಿರುವ ಗ್ರಂಥಾಲಯವನ್ನು ಉದ್ಘಾಟಿಸಲಾಯಿತು. ತದನಂತರ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಬಳಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಎರಡು ಶುದ್ಧ ಕುಡಿಯುವ ನೀರಿನ ಯಂತ್ರಗಳನ್ನು ರೋಟರಿ ಕ್ಲಬ್ ಪಿರಿಯಾಪಟ್ಟಣ ಐಕಾನ್ಸ್ ವತಿಯಿಂದ ವಿತರಿಸಲಾಯಿತು.

ರೋಟರಿ 3181ರ ಜಿಲ್ಲಾ ಗವರ್ನರ್ ವಿಕ್ರಂದತ್ತ ಅವರು ಸಂಸ್ಥೆಯ ಸಾಮಾಜಿಕ ಚಟುವಟಿಕೆ ಹಾಗೂ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿ ರೋಟರಿ ಕ್ಲಬ್ ಪಿರಿಯಾಪಟ್ಟಣ ಐಕಾನ್ಸ್ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗ, ಸಹಾಯಕ ಪ್ರಾಂತಪಾಲ ಆನಂದ್, ರೋಟರಿ ಕ್ಲಬ್ ಪಿರಿಯಾಪಟ್ಟಣ ಐಕಾನ್ಸ್ ಅಧ್ಯಕ್ಷ ಜೆ.ಎಸ್.ನಾಗರಾಜ್, ಕಾರ್ಯದರ್ಶಿ ಬಿ.ಎಸ್.ಪ್ರಸನ್ನಕುಮಾರ್, ನಿಕಟಪೂರ್ವ ಅಧ್ಯಕ್ಷ ಕೆ.ರಮೇಶ್, ನಿಯೋಜಿತ ಅಧ್ಯಕ್ಷ ಎಂ.ಬಿ.ಸಂಪತ್, ನಿಯೋಜಿತ ಕಾರ್ಯದರ್ಶಿ ಬಿ.ಎಸ್.ಸತೀಶ್ ಆರಾಧ್ಯ, ಖಜಾಂಚಿ ಬಿ.ಆರ್.ಗಣೇಶ್, ಸದಸ್ಯರಾದ ಸಿ.ಎನ್.ವಿಜಯ್, ಡಿ.ಆರ್.ಧನಂಜಯ್, ಡಿ.ರಮೇಶ್, ರವಿಚಂದ್ರ, ಅನಿತಾ, ಪ್ರೀತಿ ಅರಸ್, ವೆಂಕಟೇಶ್, ದಿಲೀಪ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net