ರೋಹಿತ ಚಕ್ರತೀರ್ಥ ವಜಾಗೊಳಿಸಿ

3Manju2
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಬಸವ ದಳದ ಪದಾಧಿಕಾರಿಗಳು ಪ್ರತಿಭಟಿಸಿದರು. ಬಸವಪ್ರಕಾಶ ಸ್ವಾಮೀಜಿ, ಅಶೋಕ ಭೆಂಡಿಗೇರಿ, ಕೆ.ಎಚ್.ಶರಣಪ್ರಸಾದ, ಆನಂದ ಗುಡಸ್, ಮಹಾಂತೇಶ ಗುಡಸ್, ಎಸ್.ಎಸ್.ಪಾಟೀಲ ಇತರರಿದ್ದರು.
Published on

ಬೆಳಗಾವಿ: ಪಠ್ಯಪುಸ್ತಕದಲ್ಲಿ ಇತಿಹಾಸ ಮತ್ತು ಧಾರ್ಮಿಕ ಭಾವನೆಗಳಿಗೆ ಅವಮಾನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ ಚಕ್ರತೀರ್ಥ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಬಸವದಳದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಕರ್ನಾಟಕದಲ್ಲಿನ ಶರಣರ ಇತಿಹಾಸವನ್ನು ತಿರುಚಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ ಚಕ್ರತೀರ್ಥ, ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ತಕ್ಷಣ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಧ್ಯೆ ಪ್ರವೇಶಿಸಿ ಅವರನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.

ಭಾರತೀಯ ಧಾರ್ಮಿಕ ಪರಂಪರೆ ಉಳಿಸಿ ಬೆಳಸುವುದು, ಮಕ್ಕಳಿಗೆ ಭಾರತೀಯ ಇತಿಹಾಸ ತಿಳಿಸುವ ಕೆಲಸವನ್ನು ಪಠ್ಯಪುಸ್ತಕದ ಮೂಲಕ ಮಾಡಬೇಕು. ಆದರೆ, ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯು ಇತಿಹಾಸವನ್ನು ಸಂಪೂರ್ಣ ತಿರುಚಿ ಮಕ್ಕಳನ್ನು ದಾರಿ ತಪ್ಪಿಸುವ ಕೆಲಸ ಮಾಡಿದೆ. ನಾಡಿನ ಹೆಸರಾಂತ ಸಾಹಿತಿಗಳನ್ನು ಅವಮಾನಿಸುವ ಕೆಲಸ ಮಾಡಲಾಗುತ್ತಿದೆ.

9ನೇ ತರಗತಿಯ ಸಾಮಾಜ ವಿಜ್ಞಾನ ತರಗತಿ ಪಠ್ಯಪುಸ್ತಕದಲ್ಲಿ ಬಸವಣ್ಣವರ ಸಂಕ್ಷಿಪ್ತ ಜೀವ ಸಾಧನೆಯ ಕುರಿತು ಆಗಿರುವ ತಪ್ಪು ಸರಿಪಡಿಸಬೇಕು. ಪಠ್ಯಪುಸ್ತಕ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಕೂಡಲಸಂಗಮ ಬಸವಧರ್ಮ ಪೀಠದ ಬಸವಪ್ರಕಾಶ ಸ್ವಾಮೀಜಿ, ಜಿಲ್ಲಾಧ್ಯಕ್ಷ ಅಶೋಕ ಭೆಂಡಿಗೇರಿ, ಕೆ.ಎಚ್.ಶರಣಪ್ರಸಾದ, ಆನಂದ ಗುಡಸ್, ಮಹಾಂತೇಶ ಗುಡಸ್, ಎಸ್.ಎಸ್.ಪಾಟೀಲ, ಎಂ.ಎಂ.ಗಡಗಲಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net