ರೌಡಿಗಳ ಪರೇಡ್

h23-police
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳ ಪರೇಡ್ ಬುಧವಾರ ಸಂಜೆ ನಡೆಯಿತು. 100ಕ್ಕೂ ಹೆಚ್ಚು ರೌಡಿ ಶೀಟರ್​ಗಳನ್ನು ಪೊಲೀಸ್ ಆವರಣಕ್ಕೆ ಕರೆಯಿಸಿದ ಪೊಲೀಸರು, ಅವರಿಂದ ಸಮಗ್ರ ಮಾಹಿತಿ ಪಡೆದರು. ಅಲ್ಲದೇ ಶಾಂತಿ, ಸುವ್ಯವಸ್ಥೆ ಕದಡದಂತೆ ಎಚ್ಚರಿಕೆ ನೀಡಿದರು. ಒಂದು ವೇಳೆ ದುಷ್ಕೃತ್ಯಗಳು ನಡೆದರೆ ಅದಕ್ಕೆ ನೀವೇ ಜವಾಬ್ದಾರಿ ಎಂಬ ಖಡಕ್ ಸಂದೇಶ ರವಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net