ಲಂಚದ ಹಣ ರೈತರಿಗೆ ಹಿಂದಿರುಗಿಸಿ

03 kurugodu 01
Published on

ಕುರುಗೋಡು: ಜೋಳ ಖರೀದಿ ಕೇಂದ್ರದಲ್ಲಿ ಅಕ್ರಮ ಎಸಗಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯನ್ನು ಅಮಾನತು ಗೊಳಿಸುವಂತೆ ಒತ್ತಾಯಿಸಿ ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಗುರುವಾರ ಮನವಿ ಸಲ್ಲಿಸಲಾಯಿತು.

ರೈತರಿಂದ ಹಿಂಗಾರು ಹಂಗಾಮಿನ ಜೋಳ ಖರೀದಿಗಾಗಿ ಸರ್ಕಾರ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ಏಜೆನ್ಸಿಯಾಗಿ ನೇಮಕ ಮಾಡಿತ್ತು. ಸಂಘದ ಕಾರ್ಯದರ್ಶಿ ಪ್ರತಿ ಕ್ವಿಂಟಾಲ್ ಜೋಳಕ್ಕೆ 100 ರೂ. ಪಡೆದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸುವ ಜತೆಗೆ ಲಂಚದ ರೂಪದಲ್ಲಿ ಪಡೆದ ಹಣವನ್ನು ಕೂಡಲೆ ರೈತರಿಗೆ ಹಿಂದಿರುಗಿಸಬೇಕೆಂದು ಒತ್ತಾಯಿಸಲಾಯಿತು.

ನಗರ ಘಟಕದ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ನೆವರ್ ರಾಜಶೇಖರ್, ರೈತ ಘಟಕದ ಅಧ್ಯಕ್ಷ ಕಗ್ಗಲ್ ಬಸವರಾಜ್, ಪ್ರಧಾನ ಕಾರ್ಯದರ್ಶಿ ಲತಾ, ಪ್ರಮುಖರಾದ ಮಾರುತಿ, ಸಿದ್ದಾರ್ಥ, ಮೇಘರಾಜು, ಸಿದ್ದಪ್ಪ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net