ಲಕ್ಷಾಂತರ ಜನರಿಗೆ ಅನುಕೂಲ

20-SanduruP1
Published on

ಸಂಡೂರು: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಎಲ್ಲ ವರ್ಗಗಳ ಜನರನ್ನು ಸಮಾನವಾಗಿ ಕಂಡ ಮುತ್ಸದ್ದಿ ರಾಜಕಾರಣಿಯಾಗಿದ್ದರು ಎಂದು ಬಿಸಿಎಂ ಅಧಿಕಾರಿ ವೀರಭದ್ರ ಹಿರೇಮಠ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು.

ದೇವರಾಜ ಅರಸು ಮುಖ್ಯಮಂತ್ರಿಯಾಗಿ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ ಅಲೋಚನೆಗಳ ಮೂಲಕ ಬಡವರ ಏಳಿಗೆಗೆ ಕಾರಣರಾದರು. ಉಳುವವನೇ ಒಡೆಯ ಕಾನೂನು ಕ್ರಾಂತಿಕಾರಿ ಹೆಜ್ಜೆಯಾಗಿತ್ತು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ ಆರಂಭಿಸಿದರು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಪುರಸಭೆ ಅಧ್ಯಕ್ಷ ಎಸ್.ಸಿರಾಜ್ ಹುಸೇನ್ ಮಾತನಾಡಿ, ದೇವರಾಜ ಅರಸು ಅವರ ಬಳುವಳಿಯಿಂದಾಗಿ ನಾನು ಪುರಸಭೆ ಅಧ್ಯಕ್ಷನಾಗಿದ್ದೇನೆ. ಅರಸು ಕೊಟ್ಟ ಕೊಡುಗೆಗಳಿಂದ ನನ್ನಂತಹ ಲಕ್ಷಾಂತರ ಜನರಿಗೆ ಉಪಯೋಗವಾಗಿದೆ ಎಂದರು.

ತಹಸೀಲ್ದಾರ್ ಅನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ಮಡಗಿನ ಬಸಪ್ಪ, ಬಿಇಒ ಡಾ.ಐ.ಆರ್.ಅಕ್ಕಿ, ವಿದ್ಯಾಮಂದಿರ ಪಪೂ ಕಾಲೇಜಿನ ಉಪನ್ಯಾಸಕ ಬಿ.ಸಿ.ಶಿವಪ್ಪ, ನಿವೃತ್ತ ಉಪನ್ಯಾಸಕ ಬಸವರಾಜ ಮಸೂತಿ, ಕಸನೌಸಂ ತಾಲೂಕು ಅಧ್ಯಕ್ಷ ಸಿದ್ದಣ್ಣ ಯಳವಾರ, ಬಿಸಿಎಂ ವಿಸ್ತರಣಾಧಿಕಾರಿ ಸಂಗಮೇಶ್, ಜಿ.ಎಸ್.ಸೋಮಪ್ಪ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net