ಲಕ್ಷಾನಟ್ಟಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ

Lokapur, Lakshanatti Checkpost, Collectorate, Inspection of Vehicles, Election,
ಲೋಕಾಪುರ ಬಳಿ ಲಕ್ಷಾನಟ್ಟಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಭೇಟಿ ನೀಡಿ ಪರಿಶೀಲಿಸಿದರು. ಚನ್ನಬಸವ ಮಾಚನೂರ, ಮಂಜುನಾಥ ಜಾಡರ, ಮಹಮ್ಮದ ಗುಡಗುಂಟಿ ಇತರರಿದ್ದರು.
Published on

ಲೋಕಾಪುರ: ಲಕ್ಷಾನಟ್ಟಿ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಭಾನುವಾರ ಬೆಳ್ಳಂಬೆಳಗ್ಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಯವೈಖರಿ, ತಪಾಸಣೆ ಕುರಿತ ಮಾಹಿತಿ ಪಡೆದುಕೊಂಡರು.

ಚೆಕ್‌ಪೋಸ್ಟ್‌ಗಳ ಮೂಲಕ ಹಾದು ಹೋಗುವ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಬೇಕು, ಚುನಾವಣೆ ಹಿನ್ನೆಲೆಯಲ್ಲಿ ವಾಹನ ತಪಾಸಣೆ ನಡೆಸುತ್ತಿರುವ ಕುರಿತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಸಾರ್ವಜನಿಕರೊಂದಿಗೆ ಸೌಹಾರ್ದದಿಂದ ನಡೆದುಕೊಳ್ಳಬೇಕು. ಚುನಾವಣೆ ಕರ್ತವ್ಯದಲ್ಲಿ ಲೋಪಕ್ಕೆ ಆಸ್ಪದ ನೀಡಬಾರದು. ಅಧಿಕಾರಿಗಳು ಪರಸ್ಪರ ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು. ಅಕ್ರಮ ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಬೇಕು ಜಿಲ್ಲಾಧಿಕಾರಿ ಎಂದರು.

ದಾಖಲೆಗಳಿಲ್ಲದ ನಗದು, ಸಾಮಗ್ರಿ, ಚಿನ್ನಾಭರಣ, ಮದ್ಯ ಹಾಗೂ ವಾಣಿಜ್ಯ ಸರಕುಗಳನ್ನು ವಾಹನಗಳಲ್ಲಿ ಸಾಗಣೆ ಮಾಡುವುದನ್ನು ಪರಿಶೀಲಿಸಬೇಕು, ದಾಖಲೆ ರಹಿತವಾಗಿ ಸಾಮಗ್ರಿ, ನಗದು ದೊರೆತರೆ ನಿಯಮಾನುಸಾರ ಪ್ರಕರಣ ದಾಖಲಿಸುವಂತೆ ಚೆಕ್‌ಪೋಸ್ಟ್ ಸಿಬ್ಬಂದಿ ಜಿಲ್ಲಾಧಿಕಾರಿ ಸೂಚಿಸಿದರು.

ಎಸ್‌ಎಸ್‌ಟಿ ತಂಡದ ಮುಖ್ಯಸ್ಥ ಚನ್ನಬಸವ ಮಾಚನೂರ, ಎ್ಎಸ್‌ಟಿ ಮಂಜುನಾಥ ಜಾಡರ, ಅರಣ್ಯ ಇಲಾಖೆ ಸಿಬ್ಬಂದಿ ಮಹಮ್ಮದ ಗುಡಗುಂಟಿ, ಪೊಲೀಸ್ ಸಿಬ್ಬಂದಿ ಎಚ್.ಎನ್.ಹೊಳೆಪ್ಪನವರ, ಅಬಕಾರಿ ಹೋಂ ಗಾರ್ಡ್ ಎಂ.ಎಂ.ಮುದ್ನೂರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net