ಲಕ್ಷ್ಮೀ ವೆಂಕಟೇಶ್ವರನಿಗೆ ವಿಶೇಷ ಅಲಂಕಾರ

09M.D.R.6
ಮದ್ದೂರು ತಾಲೂಕಿನ ಕದಲಿಪುರ ಗ್ರಾಮದ ಕದಲಿ ಲಕ್ಷ್ಮೀ ವೆಂಕಟೇಶ್ವರನನ್ನು ವಿಶೇಷವಾಗಿ ಅಲಂಕಾರ ಮಾಡಿರುವುದು.
Published on

ಮದ್ದೂರು: ಕಡೆಯ ಶ್ರಾವಣ ಶನಿವಾರದ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.

ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯಸ್ವಾಮಿ, ನರಸಿಂಹಸ್ವಾಮಿ, ವಿಶ್ವೇಶ್ವರ ಸ್ವಾಮಿ ಹಾಗೂ ಕದಲಿಪುರ ಗ್ರಾಮದ ಶ್ರೀ ಕದಲಿ ಲಕ್ಷ್ಮೀ ವೆಂಕಟೇಶ್ವರ, ಆಬಲವಾಡಿ ಗ್ರಾಮದ ತೋಪಿನ ತಿಮ್ಮಪ್ಪ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಮುಂಜಾನೆಯಿಂದಲೇ ಜನರು ದೇಗುಲಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net