

ಚಾಮರಾಜನಗರ: ಕೊಳ್ಳೇಗಾಲ ಪಟ್ಟಣದ ಲಯನ್ಸ್ ಕ್ಲಬ್‌ನಲ್ಲಿ ಇತ್ತೀಚೆಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕಟೇಶ್ ಬಾಬು, ಲಯನ್ಸ್ ಕ್ಲಬ್ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ನಿಕಟಪೂರ್ವ ಅಧ್ಯಕ್ಷ ಎಸ್.ನಾಗರಾಜು ಕೊಂಗರಹಳ್ಳಿ ಮಾತನಾಡಿ, ಇದುವರೆಗೆ ಲಕ್ಷಾಂತರ ಜನರಿಗೆ ಕಣ್ಣಿನ ತಪಾಸಣೆ ಮಾಡಲಾಗಿದೆ. 10 ಸಾವಿರಕ್ಕೂ ಹೆಚ್ಚು ಜನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಿಬಿರದ ಪ್ರಯೋಜನದ ಬಗ್ಗೆ ಇತರರಿಗೂ ಅರಿವು ಮೂಡಿಸುವಂತಾಗಬೇಕು ಎಂದು ಹೇಳಿದರು.
ಲಯನ್ಸ್ ಕ್ಲಬ್ ಸದಸ್ಯ ಜಿ.ಎಸ್.ಮಹದೇವಪ್ರಸಾದ್ ಮಾತನಾಡಿ, 47 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದರು.
ಶಿಬಿರದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮದ 84 ಜನರು ಪಾಲ್ಗೊಂಡು ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಈ ಪೈಕಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಆಯ್ಕೆಗೊಂಡ 44 ಜನರನ್ನು ಬೆಂಗಳೂರಿನ ವೆಸ್ಟ್ ಹೈ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಚನ್ನಮಾದೇಗೌಡ, ವೇಣುಗೋಪಾಲ್, ಆನಂದ್‌ರಾಮ್‌ಶೆಟ್ಟಿ, ಅಪರ್ಣಾ ಸತೀಶ್, ವೈದ್ಯೆ ಡಾ.ಸುಶಾಂತಾ ಇದ್ದರು.