ಲಯನ್ಸ್ ಕ್ಲಬ್‌ನಿಂದ ಗಾಂಧಿ ಜಯಂತಿ ಆಚರಣೆ

3 ckm 6
ಚಿಕ್ಕಮಗಳೂರಿನ ಲಯನ್ಸ್ ಸೇವಾ ಭವನದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್‌ಬಹದ್ದೂರ್ ಶಾಸ್ತಿç ಅವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಗಳಿಗೆ ಲಯನ್ಸ್ ಸೇವಾ ಟ್ರಸ್ಟ್ ಹಾಗೂ ಲಯನ್ಸ್ ಕ್ಲಬ್ ಪದಾಧಿಕಾರಿಗಳು ಪುಷ್ಪಾರ್ಚನೆ ನಡೆಸಿದರು. ಸಿ.ಪಿ.ಸುರೇಶ್, ಪ್ರೊ.ಎಚ್.ಎಸ್.ಜಗದೀಶಪ್ಪ, ಸಿ.ಎನ್.ಕುಮಾರ್, ಗೋಪಿಕೃಷ್ಣ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಜನ್ಮದಿನವನ್ನು ಲಯನ್ಸ್ ಸೇವಾ ಟ್ರಸ್ಟ್ ಹಾಗೂ ಲಯನ್ಸ್ ಕ್ಲಬ್ ಪದಾಧಿಕಾರಿಗಳು ನಗರದ ಲಯನ್ಸ್ ಸೇವಾ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಿದರು. ಮಹನೀಯರ ಜನ್ಮದಿನದ ಪ್ರಯುಕ್ತ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ಭಾವಚಿತ್ರಕ್ಕೆ ಎರಡೂ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು ಸಾಮೂಹಿಕವಾಗಿ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ರಘುಪತಿ ರಾಘವ ರಾಜಾರಾಮ್ ಗೀತೆ ಸೇರಿದಂತೆ ರಾಷ್ಟçಪಿತನಿಗೆ ಪ್ರಿಯವಾದ ಗೀತೆಗಳ ಗಾಯನ, ಸರ್ವಧರ್ಮ ಪ್ರಾರ್ಥನೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಸಿ.ಪಿ.ಸುರೇಶ್, ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತಿç ಅವರ ತತ್ವ, ಸಿದ್ಧಾಂತ ಮತ್ತು ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು. ಇಬ್ಬರು ನಾಯಕರು ಹಾಕಿ ಕೊಟ್ಟಿರುವ ಹಾದಿಯಲ್ಲಿ ಸಾಗಬೇಕು ಎಂದು ಕಿವಿಮಾತು ಹೇಳಿದರು.

ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಪ್ರೊ. ಎಚ್.ಎಸ್.ಜಗದೀಶಪ್ಪ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತಿç ಅವರ ಜೀವನ ಮತ್ತು ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.

ಈ ವೇಳೆ ಕಟ್ಟಡ ನಿರ್ಮಾಣದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಲಯನ್ಸ್ ಸೇವಾ ಟ್ರಸ್ಟ್ ನ ಬುದ್ಧಿಮಾಂದ್ಯ ಮಕ್ಕಳ ಶಾಲೆಯನ್ನು ಪುನರಾರಂಭಿಸಲಾಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಎನ್.ಕುಮಾರ್, ಕಾರ್ಯದರ್ಶಿ ಗೋಪಿಕೃಷ್ಣ, ಖಜಾಂಚಿ ಪರಮೇಶ್, ಪ್ರಾಂತೀಯ ಅಧ್ಯಕ್ಷ ಬಿ.ಎನ್.ವೆಂಕಟೇಶ್, ಟ್ರಸ್ಟ್ ನ ಖಜಾಂಚಿ ದಯಾಶಂಕರ್, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಎಚ್.ಆರ್.ಹರೀಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net