ಲಯನ್ಸ್, ಲಿಯೋ ಕ್ಲಬ್ ಪದಾಧಿಕಾರಿಗಳ ಪದಗ್ರಹಣ

Published on

ನಾಪೋಕ್ಲು: ಸ್ಥಳೀಯ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಜುಲೈ 1ರಂದು ಇಲ್ಲಿನ ಕೊಡವ ಸಮಾಜದಲ್ಲಿ ಏರ್ಪಡಿಸಲಾಗಿದೆ.

ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಎಂ.ಬಿ.ಕುಟ್ಟಪ್ಪ ಹಾಗೂ ಲಿಯೋ ಕ್ಲಬ್ ನೂತನ ಅಧ್ಯಕ್ಷರಾಗಿ ಕನ್ನಿಕ ಹಾಗೂ ಇತರ ಪದಾಧಿಕಾರಿಗಳು ಪದಗ್ರಹಣ ಮಾಡಲಿದ್ದಾರೆ. ಲಯನ್ಸ್ ಜಿಲ್ಲಾ ಪ್ರಾಂತಪಾಲ ಎಚ್.ಎಂ.ತಾರಾನಾಥ್ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸುವರು.

ಕ್ಲಬ್ಬಿನ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಲಯನ್ಸ್ ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net