ಲಯನ್ಸ್ಕ್ಲಬ್‌ನಿಂದ ಕಂಪ್ಯೂಟರ್ ಕೊಡುಗೆ

11 ckm 2
ಚಿಕ್ಕಮಗಳೂರು ಲಯನ್ಸ್ ಕ್ಲಬ್‌ನಿಂದ ಮಲೆನಾಡು ವಿದ್ಯಾಸಂಸ್ಥೆಗೆ ನಾಲ್ಕು ಕಂಪ್ಯೂಟರ್ ಖರೀದಿಸಲು ಧನ ಸಹಾಯ ಮಾಡಲಾಯಿತು. ಸಿ.ಎನ್.ಕುಮಾರ್, ಗೋಪಿಕೃಷ್ಣ, ಕೇಶವಮೂರ್ತಿ, ಡಿ.ಎಲ್.ವಿಜಯಕುಮಾರ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ಮಲೆನಾಡು ವಿದ್ಯಾಸಂಸ್ಥೆಗೆ ಲಯನ್ಸ್ ಕ್ಲಬ್ ವತಿಯಿಂದ ೪ ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಎನ್.ಕುಮಾರ್ ಮತ್ತು ಕಾರ್ಯದರ್ಶಿ ಗೋಪಿಕೃಷ್ಣ ಮಲೆನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಕೇಶಮೂರ್ತಿಯವರಿಗೆ ಕಂಪ್ಯೂಟರ್‌ಗಳಿಗೆ ತಗಲುವ ಮೊತ್ತದ ಚೆಕ್‌ನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಸಿ.ಎನ್. ಕುಮಾರ್, ಸಮಾಮುಖಿ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಚಿಕ್ಕಮಗಳೂರು ಲಯನ್ಸ್ ಸಂಸ್ಥೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಲಿ ಎಂಬ ದೃಷ್ಠಿಯಿಂದ ಕಂಪ್ಯೂಟರ್ ಖರೀದಿಸಲು ನೆರವು ನೀಡಿದೆ. ಕಾಲೇಜಿನ ಮಕ್ಕಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯಕುಮಾರ್, ಉಪಾಧ್ಯಕ್ಷರಾದ ಡಾ. ಜೆ.ಪಿ. ಕೃಷ್ಣೇಗೌಡ, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಜಿ. ರಮೇಶ್, ಲಯನ್ಸ್ಕ್ಲಬ್‌ನ ಹಿರಿಯ ಸದಸ್ಯರಾದ ಎಂ.ಆರ್. ಕೇಶವಮೂರ್ತಿ, ಲಯನ್ಸ್ ಕ್ಲಬ್ ಉಪಾಧ್ಯಕ್ಷರಾದ ಟಿ. ನಾರಾಯಣಸ್ವಾಮಿ ಹಾಗೂ ಲಯನ್ಸ್ ಶಿವಣ್ಣ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net