ಲಲಿತಕಲಾ ಅಕಾಡೆಮಿಯಿಂದ ಸ್ಥಳೀಯರಿಗೆ ಅವಕಾಶ

1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಉತ್ತರ ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ಧಾರವಾಡ ಜಿಲ್ಲೆಗೆ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ವಿವಿಧ ಸಂಸ್ಥೆಗಳು ಬರುತ್ತಿವೆ. ಶೀಘ್ರದಲ್ಲಿ ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿ ಕಾರ್ಯಾರಂಭ ಮಾಡಲಿದೆ. ಇದರಿಂದ ರಾಜ್ಯದ ಕಲಾವಿದರಿಗೆ ಅವಕಾಶ ಲಭಿಸಲಿವೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೇಂದ್ರ ಲಲಿತಕಲಾ ಅಕಾಡೆಮಿ ಕಟ್ಟಡಕ್ಕೆ ಅಡಿಗಲ್ಲು ಕಾರ್ಯಕ್ರಮ ಹಾಗೂ ಅಕಾಡೆಮಿ ಕಾರ್ಯಾರಂಭ ಕುರಿತು ಹಿರಿಯ ಕಲಾವಿದರು, ಕಲಾತಜ್ಞರೊಂದಿಗೆ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಕಾಡೆಮಿ ಜಿಲ್ಲೆಗೆ ಬಂದಿರುವುದು ಹೆಮ್ಮೆಯ ಸಂಗತಿ. ಇದರಿಂದ ಇಡೀ ಸಮಗ್ರ ಕರ್ನಾಟಕಕ್ಕೆ ಅನುಕೂಲವಾಗುತ್ತದೆ. ಅಕಾಡೆಮಿಯಲ್ಲಿನ ತಜ್ಞರು ಇಲ್ಲಿನ ಕಲಾವಿದರಿಗೆ ಉತ್ತಮ ತರಬೇತಿ ನೀಡಿ, ಪ್ರದರ್ಶನಕ್ಕೆ ಅವಕಾಶ ಕಲ್ಪಿಸುತ್ತಾರೆ. ಪ್ರಸಕ್ತ ವರ್ಷದಿಂದಲೇ ಅಕಾಡೆಮಿಯ ಪ್ರಾದೇಶಿಕ ಕಚೇರಿ ತಾತ್ಕಾಲಿಕ ಕಟ್ಟಡದಲ್ಲಿ ಕಾರ್ಯಾರಂಭ ಮಾಡಲಿದೆ. ೆ. 20ರಂದು ಕೋರ್ಟ್ ವೃತ್ತ ಬಳಿಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆವರಣದಲ್ಲಿ ಕಟ್ಟಡಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೇಂದ್ರ ಸಂಸ್ಕೃತಿ ಮಂತ್ರಾಲಯದ ರಾಜ್ಯ ಸಚಿವ ಅರ್ಜುನ ಮೇಘವಾಲ ಹಾಗೂ ಶಾಸಕರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ಅಕಾಡೆಮಿ ಪ್ರಾದೇಶಿಕ ಕಚೇರಿಯ ಸಂಯೋಜಕ ಶ್ರೀನಿವಾಸ ಶಾಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಕಲಾವಿದರಾದ ಸುರೇಶ ಹಾಲಭಾವಿ, ಬಿ. ಮಾರುತಿ, ಸರ್ಕಾರಿ ಚಿತ್ರಕಲಾ ಕಾಲೇಜಿನ ಮುಖ್ಯಸ್ಥ ಡಾ. ಬಸವರಾಜ ಕುರಿಯವರ, ಎನ್.ಎಂ. ದಾಟನಾಳ, ಜೆ.ಎಸ್.ಎಸ್. ಹಾಲಭಾವಿ ಸ್ಕೂಲ್ ಆ್ ಆರ್ಟ್ಸ್‌ನ ಪ್ರಾಚಾರ್ಯ ಡಾ. ಬಿ.ಎಂ. ಪಾಟೀಲ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net