ಲವತ್ತಾದ ಕೃಷಿ ಭೂಮಿ ಕೈಗಾರಿಕೆ ಬಳಕೆಗೆ ಕೊಡಲ

The fertile agricultural land should be given over to industrial use.
ತಿಡಗುಂದಿ ವ್ಯಾಪ್ತಿಯಲ್ಲಿ ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪಿಸಬಾರದು ಎಂದು ಆಗ್ರಹಿಸಿ ರೈತರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರೈತರಾದ ಈಶ್ವರಪ್ಪ ಬೆಳ್ಳುಂಡಗಿ, ಸಂಗಮೇಶ ಸಗರ, ರಾಮನಗೌಡ ಪಾಟೀಲ, ಮಡಿವಾಳಪ್ಪ ತಿಲ್ಲಿಹಾಳ, ಗೋಪಾಲ ಭೋಸಲೆ, ಬಂದ್ಗಿಸಾಬ್​ ವಾಲಿಕಾರ, ಸಿದ್ದರಾಯ ತಿಲ್ಲಿಹಾಳ ಇತರರಿದ್ದರು.
Published on

ವಿಜಯಪುರ: ತಿಡಗುಂದಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 52ಕ್ಕೆ ಹೊಂದಿಕೊಂಡ 1203 ಎಕರೆ ರೈತರ ಕೃಷಿ ಭೂಮಿಯಲ್ಲಿ ರಾಜ್ಯ ಸರ್ಕಾರ ಕೈಗಾರಿಕಾ ಹಬ್​ ನಿರ್ಮಾಣಕ್ಕೆ ಮುಂದಾಗಿದ್ದು, ಲವತ್ತಾದ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗೆ ಬಿಟ್ಟುಕೊಡುವುದಿಲ್ಲ ಎಂದು ರೈತರು ಸ್ಪಷ್ಟ ಪಡಿಸಿದ್ದಾರೆ.

ಭೂಮಿ ಸರ್ವೇ ಮಾಡಲು ಬಂದಿದ್ದ ಅಧಿಕಾರಿಕಾರಿಗಳನ್ನು ರೈತರು ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿ ಮರಳಿ ಕಳಿಸಿದ್ದಾರೆ. ಈ ವೇಳೆ ಅಧಿಕಾರಿಗಳ ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆಯಿತು.

ಮುಖಂಡ ಗಿರೀಶ ತಾಳಿಕೋಟಿ ಮಾತನಾಡಿ, ಈಗಾಗಲೇ 230 ರೈತರ ಆೇಪಣಾ ಪತ್ರವನ್ನು ರಾಜ್ಯ ಸರ್ಕಾರಕ್ಕೆ, ಬೃಹತ್​ ಕೈಗಾರಿಕಾ ಸಚಿವರಿಗೆ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಸಲ್ಲಿಸಿ ಯಾವ ರೈತರು ಭೂಮಿಯನ್ನು ಬಿಟ್ಟು ಕೊಡುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೂ ಸರ್ವೇ ಕಾರ್ಯಕ್ಕೆ ಚಾಲನೆ ನೀಡಿರುವುದು ರೈತ ವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲವತ್ತಾದ ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪಿಸಿದರೆ ಕೃಷಿ ಸಂಸತ ನಾಶವಾಗುತ್ತದೆ. ಹೀಗಾಗಿ ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಹಿರಿಯ ರೈತ ಈಶ್ವರಪ್ಪ ಬೆಳ್ಳುಂಡಗಿ ಹೇಳಿದರು.

ಮಡಿವಾಳಪ್ಪ ತಿಲ್ಲಿಹಾಳ, ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ರಾಮನಗೌಡ ಪಾಟೀಲ, ಮಡಿವಾಳಪ್ಪ ತಿಲ್ಲಿಹಾಳ, ಗೋಪಾಲ ಭೋಸಲೆ, ಬಂದ್ಗಿಸಾಬ್​ ವಾಲಿಕಾರ, ಸಿದ್ದರಾಯ ತಿಲ್ಲಿಹಾಳ, ಮದನಗೌಡ ಬಿರಾದಾರ, ಅಶೋಕಗೌಡ ಬಿರಾದಾರ, ಅಶೋಕಗೌಡ ಪಾಟೀಲ, ಕಲ್ಲಪ್ಪ ಕುರಬರ ಹಾಗೂ ರೈತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net