ಲಸಿಕೆಗಳ ಮಹತ್ವ ಕುರಿತು ಅರಿವು ಮೂಡಿಸಿ

SRP _07-02 jpg
Published on

ಶ್ರೀರಂಗಪಟ್ಟಣ: ಕ್ಷೇತ್ರದ ಯಾವುದೇ ಮಗು ಹಾಗೂ ಗರ್ಭಿಣಿಯರು ಇಂದ್ರಧನುಷ್ ಲಸಿಕೆಯಿಂದ ವಂಚಿತರಾಗದೆ ಆರೋಗ್ಯ ಇಲಾಖೆಯ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಎ.ಬಿ.ರಮೇಶ ಬಂಡಿಸಿದ್ದೇಗೌಡ ಸಲಹೆ ನೀಡಿದರು.


ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಮೊದಲ ಹಂತದ ಇಂದ್ರಧನುಷ್ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಎಲ್ಲ ಆರೋಗ್ಯ ಸಂಸ್ಥೆಗಳಲ್ಲೂ ಈ ಲಸಿಕೆಗಳನ್ನು ನೀಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ಮಾಡಿ ಲಸಿಕೆಗಳ ಮಹತ್ವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.


ತಾಲೂಕು ಆರೋಗ್ಯಾಧಿಕಾರಿ ಡಾ.ಎನ್.ಕೆ ವೆಂಕಟೇಶ್ ಮಾತನಾಡಿ, ತಾಲೂಕಿನಲ್ಲಿ 40 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಮಕ್ಕಳಿಗೆ ಬರುವ ಕಾಯಿಲೆಗಳಾದ ಪೋಲಿಯೋ, ಹೆಪಟೈಟಿಸ್, ಬಾಲಕ್ಷಯ, ಗಂಟಲು ಮಾರಿ, ನಾಯಿ ಕೆಮ್ಮು, ಧನುರ್ವಾಯು, ರೋಟವೈರಸ್, ನಿಮೋನಿಯಾ, ದಡಾರ-ರುಬೆಲ್ಲ, ಮಿದುಳು ಜ್ವರ, ಮುಂತಾದ ರೋಗಗಳು ಬಾಧಿಸದಂತೆ ತಡೆಗಟ್ಟಲು ಲಸಿಕೆಗಳನ್ನು ನೀಡಲಾಗುತ್ತದೆ. ಲಸಿಕೆ ಪಡೆದ ಪ್ರತಿ ಮಗುವಿನ ದೃಢೀಕರಣ ಸರ್ಟಿಫಿಕೇಟ್ ಅನ್ನು ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ. ಡಿಸೆಂಬರ್ ಅಂತ್ಯಕ್ಕೆ ದಡಾರ-ರುಬೆಲ್ಲ ನಿರ್ಮೂಲನೆ ಗುರಿ ಹೊಂದಲಾಗಿದ್ದು, ಪೋಷಕರು ತಪ್ಪದೇ ಆರೋಗ್ಯ ಕೇಂದ್ರಕ್ಕೆ ತಮ್ಮ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸುವಂತೆ ಮನವಿ ಮಾಡಿದರು.


ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಮಾರುತಿ, ಮಕ್ಕಳ ತಜ್ಞೆ ಡಾ.ಪಾರ್ವತಿ, ಪುರಸಭೆ ವ್ಯವಸ್ಥಾಪಕ ಸೋಮಶೇಖರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ್, ಅಂಗನವಾಡಿ ಮೇಲ್ವಿಚಾರಕರಾದ ಅಮೃತ್, ಪುಷ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net