ಲಾಟರಿ ಮಾರುತ್ತಿದ್ದವನ ಬಂಧನ

Published on

ವಿರಾಜಪೇಟೆ: ಅಂತರ ರಾಜ್ಯದಿಂದ ಅಕ್ರಮವಾಗಿ ಲಾಟರಿ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ.

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಕೂತುಪರಂಬು ನಿವಾಸಿ ಲೇಟ್ ಬಾಲನ್ ಎಂಬುವರ ಪುತ್ರ ಕೆ.ಮೋಹನ್ (41)ಬಂಧಿತ ಆರೋಪಿ. ವಿರಾಜಪೇಟೆ ತಾಲೂಕಿನ ಪೆರುಂಬಾಡಿ ಗ್ರಾಮದಲ್ಲಿ ಅಕ್ರಮವಾಗಿ ಲಾಟರಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ವಿರಾಜಪೇಟೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದರು.

ಬಂಧಿತ ಆರೋಪಿಯಿಂದ 21 ಸಾವಿರ ರೂ. ಮೌಲ್ಯದ ಲಾಟರಿ ಟಿಕೆಟ್ ವಶಪಡಿಸಿಕೊಳ್ಳಲಾಗಿದೆ. ವಿರಾಜಪೇಟೆ ನಗರ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ನಗರ ಠಾಣೆಯ ಎಎಸ್‌ಐ ಮಂಜುನಾಥ್, ಅಪರಾಧ ದಳ ಸಿಬ್ಬಂದಿ ಧರ್ಮ, ಶೇಖರ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net