

ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವ ವಿಚಾರದಲ್ಲಿ ನಡೆದ ಪ್ರತಿಭಟನೆ ವೇಳೆ ಲಾಠಿ ಚಾರ್ಜ ಮಾಡಿರುವುದನ್ನು ಖಂಡಿಸಿ ವೀರಶೈವ ಲಿಂಗಾಯತ ಪಂಚಮಸಾಲಿ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಹೊರ ವಲಯದ ಶಿರೂರ ಅಗಸಿ ಬಳಿ ಸಮಾಜದ ಮುಖಂಡರು ಸೇರಿ ಬೆಳಗ್ಗೆ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಬೈಕ್ ರ‍್ಯಾಲಿ ಮೂಲಕ ಜಿಲ್ಲಾಡಳಿತಕ್ಕೆ ಆಗಮಿಸಿ ಜಿಲ್ಲಾಽಕಾರಿ ಜಾನಕಿ ಕೆ.ಎಂ ಅವರಿಗೆ ಮನವಿ ಸಲ್ಲಿಸಿದರು.
ಪಂಚಮಸಾಲಿ ಸಮಾಜ ಜಿಲ್ಲಾಧ್ಯಕ್ಷ ರವಿ ಪಟ್ಟಣದ ಮಾತನಾಡಿ, ಬೆಳಗಾವಿ ಸುವರ್ಣಸೌಧ ಎದುರು ಪಂಚಮಸಾಲಿಗರ ಮೇಲೆ ಪೊಲೀಸರು ಲಾಠಿ ಜಾರ್ಜ್ ಮಾಡಿರುವುದು ಖಂಡನೀಯ. ಸರ್ಕಾರ ಪೊಲೀಸ್ ಬಲ ಪ್ರಯೋಗಿಸಿ ಮೀಸಲು ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ. ಅಮಾಯಕರ ವಿರುದ್ಧ ದಾಖಲಿಸಿಕೊಂಡಿರುವ ಪ್ರಕರಣ ಹಿಂಪಡೆಯಬೇಕು. ಇಲ್ಲವಾದರೆ ಪೊಲೀಸ್ ಅಽಕಾರಿಗಳು ನಮ್ಮ ಸಮಾಜದ ಮೇಲೆ ನಡೆಸಿರುವ ಹಲ್ಲೆ ಖಂಡಿಸಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಮಾಜದ ಮುಖಂಡ ಶ್ರೀಶೈಲ ಕರಿಶಂಕರಿ ಮಾತನಾಡಿ, ನ್ಯಾಯ ಕೇಳಲು ಹೋದವರ ಮೇಲೆ ಲಾಠಿ ಪ್ರಹಾರ ನಡೆಸಿ ಪಂಚಮಸಾಲಿ ಸಮಾಜದ ಅಸ್ಮಿತೆಗೆ ಧಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ನಡೆ ಖಂಡನೀಯ ಎಂದು ತಿಳಿಸಿದರು.
ಮುಖಂಡ ಕಲ್ಲಪ್ಪ ಭಗವತಿ ಮಾತನಾಡಿ, ಹಲವು ವಷÀðಗಳಿಂದ ಬಸವಣ್ಣನಂತೆ ಶಾಂತಿಯುತ ಹೋರಾಟ ನಡೆಸಿದ್ದೇವೆ, ಆದರೆ ಇನ್ನು ಮುಂದೆ ರಾಣಿ ಚನ್ನಮ್ಮಳ ರೀತಿಯಲ್ಲಿ ಕ್ರಾಂತಿಯಿAದ ಹೋರಾಡುತ್ತೇವೆ ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೋರಾಟ ನಡೆಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಬಸವರಾಜ ರಾಜೂರ, ಆನಂದ ಕೋಟಗಿ, ಪರಶುರಾಮ್ ಮುಳುಗುಂದ, ನಿಂಗರಾಜ ಪಲ್ಲೇದ, ಪ್ರಶಾಂತ ಗಬ್ಬೂರ, ರಾಜು ಬಗಲಿ, ಸುರೇಶ್ ಕುನ್ನೂರ, ಬಸಪ್ಪ ಮೆಣಸಿ ನಕಾಯಿ, ಬಸು ಹುನಗುಂದ, ಗುರುಬಸವ ಸಿಂಧೂರ, ಸಂಗಣ್ಣ ಶಿರೂರ, ರಾಜಶೇಖರ್ ಅಂಗಡಿ, ಸಿದ್ದಪ್ಪ ಹಳ್ಳೂರ, ಉಮೇಶ್ ಹಂಚಿನಾಳ, ಹನುಮಂತಪ್ಪ ಶಿಕ್ಕೇರಿ, ಉಮೇಶ ಜುಮನಾಳ ಇದ್ದರು.