ಲಾರಿ-ಕಾರು ಡಿಕ್ಕಿಯಾಗಿ ಒಬ್ಬ ಸಾವು

IMG-20230705-WA0054
Published on

ಬೈಲಕುಪ್ಪೆ: ಬಿ.ಎಂ. ರಸ್ತೆಯಲ್ಲಿ ಮಂಗಳವಾರ ರಾತ್ರಿ ಲಾರಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲಿ ಮೃತಪಟ್ಟಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿವೆ.


ಬೈಲಕುಪ್ಪೆ ಗ್ರಾಮದ ನಾಗಣ್ಣ ಎಂಬುವರ ಪುತ್ರ ಅಭಿಲಾಷ್ (26) ಮೃತರು. ಬೈಲಕುಪ್ಪೆ ಗ್ರಾಮದ ದೇವರಾಜ ಎಂಬುವರ ಪುತ್ರ ಸಂದೀಪ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.


ಬೈಲಕುಪ್ಪೆಯಿಂದ ಪಿರಿಯಾಪಟ್ಟಣದ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಎದುರಿನಿಂದ ಬರುತ್ತಿದ್ದ ಕಾರಿಗೂ ಡಿಕ್ಕಿಯಾಗಿದೆ. ಬೈಲಕುಪ್ಪೆ ಪೊಲೀಸ್ ಠಾಣಾಧಿಕಾರಿ ಡಿ.ಎನ್.ಅಜಯ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವವನ್ನು ಕುಶಾಲನಗರ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.

ಗಂಭೀರ ಗಾಯಗಳಾಗಿರುವ ಕಾರು ಚಾಲಕ ಸಂದೀಪ್‌ನನ್ನು ಕುಶಾಲನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net