ಕೊಳ್ಳೇಗಾಲ: ತಾಲೂಕಿನ ಕಾಮಗೆರೆ ಗ್ರಾಮದ ಹೋಲಿ ಕ್ರಾಸ್ ಆಸ್ಪತ್ರೆ ಬಳಿ ಸೈಕಲ್ ಸವಾರನಿಗೆ ಭಾನುವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾನೆ.
ಗ್ರಾಮದ ಮಠದ ಬೀದಿ ನಿವಾಸಿ ಚಂದ್ರಪ್ಪ(58)ಮೃತ ದುರ್ದೈವಿ. ಈತ ಎಂದಿನಂತೆ ಜಮೀನಿನ ಕಡೆಗೆ ಸೈಕಲ್‌ನಲ್ಲಿ ತೆರಳುತ್ತಿದ್ದ ವೇಳೆ ಹನೂರು ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಈ ಸಂಬಂಧ ಮೃತ್ತನ ಸೋದರ ನಟರಾಜಪ್ಪ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಲಾರಿ ಯನ್ನು ವಶಕ್ಕೆ ಪಡೆದಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ.ಕವಿತಾ, ಸಿಪಿಐ ಶ್ರೀಕಾಂತ್, ಎಸ್‌ಐ ಸುಪ್ರೀತ್ ಭೇಟಿ ನೀಡಿ ಪರೀಶೀಲಿಸಿದರು. ಸೋಮವಾರ ಕೊ ಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.