

ಗಂಡಸಿ: ಆಲೂಗಡ್ಡೆ ತುಂಬಿಕೊಂಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಚಾಲಕ ಸೇರಿದಂತೆ ನಾಲ್ವರು ಕೂಲಿ ಕಾರ್ಮಿಕರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ರಾತ್ರಿ ಗಂಡಸಿ ಹೋಬಳಿ ವ್ಯಾಪ್ತಿಯ ಹಳ್ಳಿಗಳ ರೈತರು ಬೆಳೆದ ಆಲೂಗಡ್ಡೆ ತುಂಬಿಕೊಂಡು ಬೆಂಗಳೂರಿಗೆ ಲಾರಿ ತೆರಳುತ್ತಿತ್ತು. ಗಂಡಸಿ ಹ್ಯಾಂಡ್‌ಪೋಸ್ಟ್-ಚನ್ನರಾಯಪಟ್ಟಣ ರಸ್ತೆಯಲ್ಲಿ ರಾತ್ರಿ 11 ಗಂಟೆ ಸುಮಾರಿನಲ್ಲಿ ಲಾರಿಯ ಸ್ಟೇರಿಂಗ್ ರಾಡ್ ಕಟ್ಟಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಕೂಲಿ ಕಾರ್ಮಿಕರು, ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಡಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.