ಲಾರಿ-ಬಸ್ ಡಿಕ್ಕಿ, ೮ ಜನರಿಗೆ ಗಾಯ

WhatsApp Image 2023-12-21 at 18.37.25
Published on

ಯಾದಗಿರಿ: ಸರಕಾರಿ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ಉಂಟಾಗಿದ್ದು, ವೇಗವಾಗಿ ಲಾರಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ೮ ಜನರು ಗಾಯಗೊಂಡ ಘಟನೆ ತಾಲೂಕಿನ ಅಶನಾಳ ಗೇಟ್ ಬಳಿ ಬುಧವಾರ ತಡ ರಾತ್ರಿ ನಡೆದಿದೆ.


ಯಾದಗಿರಿ ನಗರದಿಂದ ಚೆಲ್ಲೇರಿ ಗ್ರಾಮಕ್ಕೆ ಹೊರಟಿದ್ದ ಬಸ್‌ಗೆ ಎದುರುಗಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಬಸ್‌ನಲ್ಲಿದ್ದ ೭ ಹಾಗೂ ಲಾರಿ ಚಾಲಕ ಸೇರಿ ೮ ಜನರು ಗಾಯವಾಗಿದೆ. ತಕ್ಷಣವೇ ಗಾಯಾಳುಗಳನ್ನು ಯಾದಗಿರಿ ನಗರದ ಜಿಲ್ಲಾಸ್ಪತ್ರೆಗೆ ಸೇರಿಸಿ, ನಂತರ ಇತರರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ನಡೆದ ಸುದ್ದಿ ತಿಳಿದು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಎಸ್ಪಿ ಜಿ. ಸಂಗೀತಾ, ಡಿವೈಎಸ್ಪಿ ಬಸವರಾಜ ಸೇರಿದಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net