

ಬೆಳಗಾವಿ: ನಗರದ ಕ್ಯಾಂಪ್ ಪ್ರದೇಶದ ಮೀನು ಮಾರುಕಟ್ಟೆ ರಸ್ತೆಯಲ್ಲಿ ಬುಧವಾರ ಶಾಲೆಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಲಾರಿ ಹರಿದಿದ್ದು, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟನೆಯಿಂದ ರೊಚ್ಚಿಗೆದ್ದ ಜನರು ಲಾರಿ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದರು.
ಕ್ಯಾಂಪ್ ಪ್ರದೇಶ ಅರ್ಹಾನ್ ಫಾರೂಕ್ ಬೇಪಾರಿ (10) ಮೃತಪಟ್ಟ ವಿದ್ಯಾರ್ಥಿ. ಮೃತ ವಿದ್ಯಾರ್ಥಿಯ ಅಕ್ಕ ಅತಿಕಾ ಬೇಪಾರಿ, ವಿದ್ಯಾರ್ಥಿ ಆಯುಷ್ಯ ಗಂಭೀರ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಯಾಂಪ್ ಪ್ರದೇಶದ ಮೀನು ಮಾರುಕಟ್ಟೆಯ ಮುಖ್ಯ ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಸ್ಕೂಟರ್ಗೆ ಡಿಕ್ಕಿ ಹೊಡೆಯಿತು. ರಸ್ತೆಯ ಮೇಲೆ ಬಿದ್ದ ಅರ್ಹಾನ್ ಮೇಲೆ ಲಾರಿ ಚಕ್ರಗಳು ಹರಿದವು.
ಕೂದಲೆಳೆ ಅಂತರದಲ್ಲೇ ಅತಿಕಾ ಪ್ರಾಣಾಪಾಯದಿಂದ ಪಾರಾದರು. ಈ ವೇಳೆ ಲಾರಿ ಚಾಲಕ ವಾಹನವನ್ನು ರಸ್ತೆ ಪಕ್ಕಕ್ಕೆ ಓಡಿಸಿದ್ದರಿಂದ ನಡೆದುಕೊಂಡು ಹೋಗುತ್ತಿದ್ದ ಆಯುಷ್ಗೂ ಗುದ್ದಿದೆ. ಎರಡು ದಿನಗಳ ಹಿಂದಷ್ಟೇ ನಗರದ ಹಳೆಯ ಪಿಬಿ ರಸ್ತೆಯಲ್ಲಿ ಲಾರಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಉದ್ರಿಕ್ತ ಸ್ಥಳಿಯರು ಲಾರಿ ಮೇಲೆ ಕಲ್ಲು ತೂರಾಟ ನಡೆಸಿದರು.
ಇದರಿಂದಾಗಿ ಕೆಲಸಕಾಳ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ತಕ್ಷಣ ಸ್ಥಳಕ್ಕೆ ಆಗಮಿಸಿದ ಕ್ಯಾಂಪ್ ಠಾಣೆ ಪೊಲೀಸರ ಮೇಲೆ ಜನರು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.