ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರದ ನೆರವು ಅಗತ್ಯ

CTD NEWS BKR--008
Published on

ಚಿತ್ರದುರ್ಗ: ಚುನಾವಣೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೆ ಮತದಾನ ಮಾಡುವ ಮೂಲಕ ಕಾನೂನು ಬದ್ಧ ತಮ್ಮ ಹಕ್ಕನ್ನು ಚಲಾಯಿಸ ಬೇ ಕೆಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಕೆ.ರೆಹಮತ್‌ವುಲ್ಲಾ ಹೇಳಿದರು.
ರಾಜ್ಯಏಡ್ಸ್ ನಿಯಂತ್ರಣ ಸೊಸೈಟಿ,ಜಿಲ್ಲಾಡಳಿತ ಜಿಪಂ,ಆರೋಗ್ಯಇಲಾಖೆ ಹಾಗೂ ಅಭಿವೃದ್ಧಿ ಸಾಮಾಜಿಕ ಸೇವಾ ಸಂಸ್ಥೆಯಿಂದ ಸೇ ವಾದಳದ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಲಿಂಗತ್ವ ಅಲ್ಪ ಸಂಖ್ಯಾತರು ಸಾಮಾಜಿಕವಾಗಿ ಮುಖ್ಯವಾಹಿನಿಗೆ ಬರುವಂತಾಗಲು ಸರ್ಕಾರ ಎಲ್ಲ ಅಗತ್ಯ ನೆರವನ್ನು ಒದಗಿಸಬೇಕಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಭಾರತಿ ಆರ್.ಬಣಕಾರ್ ಹಾಗೂ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ನರಸಿಂಹಮೂರ್ತಿ ಮಾ ತನಾಡಿದರು. ಆರೋಗ್ಯ ಇಲಾಖೆಯ ಅಶೋಕ್,ರವಿ,ಅಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಮಂಜುಳಾ,ನರನೇಹಳ್ಳಿ ಅರುಣ್‌ಕುಮಾರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net