

ಹಾಸನ: ಸಂಸದ ಪ್ರಜ್ವಲ್‌ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಆರೋಪದಡಿ ಬಂಧಿತರಾಗಿರುವ ಬಿಜೆಪಿ ಕಾರ್ಯಕರ್ತರಾದ ಲಿಖಿತ್ ಗೌಡ ಹಾಗೂ ಚೇತನ್ ಅವರ ಜಾಮೀನು ಅರ್ಜಿಯನ್ನು ಮಂಗಳವಾರ ನ್ಯಾಯಾಲಯ ವಜಾಗೊಳಿಸಿದೆ.
ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಜಾಮೀನು ಕೋರಿ ನ್ಯಾಯಾಂಗ ಬಂಧನದಲ್ಲಿರುವ ಲಿಖಿತ್ ಗೌಡ, ಚೇತನ್ ಅರ್ಜಿ ಸಲ್ಲಿಸಿದ್ದರು.
ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳ ಅರ್ಜಿಯನ್ನು ವಜಾಗೊಳಿಸಿತು. ಮೇ 12 ರಂದು ಲಿಖಿತ್ ಹಾಗೂ ಚೇತನ್ ಅವರನ್ನು ಎಸ್‌ಐಟಿ ಬಂಧಿಸಿತ್ತು. ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಆರೋಪಿಗಳ ಜೈಲು ವಾಸ ಮುಂದುವರಿಯಲಿದೆ.