ಲೇಖಕಿಯರ ಸಮ್ಮೇಳನ ಚನ್ನಮ್ಮ ಹಳ್ಳಿಕೇರಿ ಸರ್ವಾಧ್ಯಕ್ಷೆ

26-hvr-06 channamma hallikeri
Published on

ಹಾವೇರಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಲೇಖಕಿಯರ ರಾಜ್ಯಮಟ್ಟದ ಆರನೇ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ವೈಚಾರಿಕ ಚಿಂತಕಿ ಚನ್ನಮ್ಮ ಹಳ್ಳಿಕೇರಿ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಾತ್ಮಾ ಗಾಂಧೀಜಿ, ವಿನೋಬಾ ಭಾವೆ ಅವರ ಜೊತೆ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡವರು ಚನ್ನಮ್ಮ ಹಳ್ಳಿಕೇರಿ. ಸಮ್ಮೇಳನವನ್ನು ಸೆ. 4ರಂದು ನಗರದ ಗೌರಿಮಠದ ಶ್ರೀಮಲ್ಲಿಕಾರ್ಜುನ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಗೌರಿಮಠದ ಶಿವಯೋಗಿ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಬೆಳ್ಳಟ್ಟಿ ರಾಮಲಿಂಗೇಶ್ವರ ಮಠದ ಬಸವರಾಜ ಸ್ವಾಮೀಜಿ ಉದ್ಘಾಟಿಸುವರು. ತಿಪ್ಪಾಯಿಕೊಪ್ಪದ ಮಹಾಂತ ಸ್ವಾಮೀಜಿ ಸಮ್ಮುಖ ವಹಿಸುವರು. ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಸಮ್ಮೇಳನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕುರಿತು ವಿಚಾರಗೋಷ್ಠಿ, ಕವಿಗೋಷ್ಠಿ ನಡೆಯಲಿವೆ ಎಂದು ಸಮ್ಮೇಳನದ ಕಾರ್ಯದರ್ಶಿ ಡಾ. ಗಂಗಯ್ಯ ಕುಲಕರ್ಣಿ, ಜಿಲ್ಲಾಧ್ಯಕ್ಷ ವಿರೂಪಾಕ್ಷ ಲಮಾಣಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net